ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಮ್ಮು ಕಾಶ್ಮೀರಕ್ಕೆ ಯಾವಾಗ ಬರಲಿ?’: ರಾಹುಲ್‌

Last Updated 15 ಆಗಸ್ಟ್ 2019, 5:13 IST
ಅಕ್ಷರ ಗಾತ್ರ

ನವದೆಹಲಿ: ‘ಜಮ್ಮು ಕಾಶ್ಮೀರಕ್ಕೆ ಭೇಟಿನೀಡಲು ನಾನು ಬಯಸುತ್ತೇನೆ’ ಎಂದು ಪುನರುಚ್ಚರಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ‘ಯಾವಾಗ ಬರಲಿ’ ಎಂದು ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಅವರನ್ನು ಪ್ರಶ್ನಿಸಿದ್ದಾರೆ.

‘ರಾಜ್ಯಪಾಲರ ಆಹ್ವಾನವನ್ನು ಒಪ್ಪಿಕೊಂಡು, ಜಮ್ಮು ಕಾಶ್ಮೀರಕ್ಕೆ ಹೋಗಲು ಸಿದ್ಧನಿದ್ದೇನೆ ಎಂದು ಅವರಿಗೆ ತಿಳಿಸಿದ್ದೆ. ಆದರೆ ಅದಕ್ಕೆ ಅವರ ಪ್ರತಿಕ್ರಿಯೆ ನೀರಸವಾಗಿತ್ತು. ಆತ್ಮೀಯ ‘ಮಲಿಕ್‌’ ಜೀ... ನಿಮ್ಮ ಆಹ್ವಾನವನ್ನು ಸ್ವೀಕರಿಸಿ, ಯಾವುದೇ ಷರತ್ತುಗಳಿಲ್ಲದೆ ಜಮ್ಮು ಕಾಶ್ಮೀರದ ಜನರನ್ನು ಮಾತನಾಡಿಸಲು ಉತ್ಸುಕನಾಗಿದ್ದೇನೆ. ಯಾವಾಗ ಬರಲಿ’ ಎಂದು ರಾಹುಲ್‌ ಪ್ರಶ್ನಿಸಿದ್ದಾರೆ.

ವಿರೋಧಪಕ್ಷಗಳ ನಾಯಕರ ನಿಯೋಗದೊಂದಿಗೆ ಜಮ್ಮು ಕಾಶ್ಮೀರಕ್ಕೆ ಭೇಟಿನೀಡುವುದಾಗಿ ಹೇಳಿರುವ ರಾಹುಲ್‌ ಅವರನ್ನು ಬುಧವಾರ ಟೀಕಿಸಿದ್ದ ಮಲಿಕ್‌ ಅವರು, ‘ರಾಹುಲ್‌ ಗಾಂಧಿ ಅವರು ಜಮ್ಮು ಕಾಶ್ಮೀರದಲ್ಲಿ ಗಲಭೆ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT