ಶನಿವಾರ, ಜುಲೈ 31, 2021
28 °C

ಗಡಿ ವಿವಾದ: ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ ರಾಹುಲ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಚೀನಾ ಗಡಿ ವಿವಾದದಲ್ಲಿ ಭಾರತದ ನಿಲುವಿನ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ಮಾಡಿದ್ದಾರೆ.

‘ಚೀನಾದ ಆಕ್ರಮಣದ ವಿರುದ್ಧ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಚೀನಾವು ಭಾರತದ ಭೂ ಪ್ರದೇಶವನ್ನು ಆಕ್ರಮಿಸಿದೆಯೇ? ಎಂದು ಪ್ರಶ್ನಿಸಿರುವ ಅವರು, ತಮ್ಮ ತಂದೆ ರಾಜೀವ್ ಗಾಂಧಿ ಅವರು ಸೆರೆ ಹಿಡಿದಿರುವ ಪಾಂಗೊಂಗ್ ಟ್ಸೊ ಸರೋವರದ ಚಿತ್ರವನ್ನು ಟ್ವಿಟರ್‌ನಲ್ಲಿ ಟ್ಯಾಗ್ ಮಾಡಿದ್ದಾರೆ.

 

ಭಾರತದ ಭೂ ಪ್ರದೇಶವನ್ನು ಯಾರೂ ಅತಿಕ್ರಮಿಸಿಲ್ಲ ಎಂದು ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಈ ಹೇಳಿಕೆಯನ್ನು ರಾಹುಲ್ ಪ್ರಶ್ನಿಸಿದ್ದರು. ಚೀನಾ ಆಕ್ರಮಣದ ಬಗ್ಗೆ ಈ ಮೊದಲೂ ರಾಹುಲ್ ಪ್ರಶ್ನೆ ಮಾಡಿದ್ದರು. ಗಡಿ ಬಿಕ್ಕಟ್ಟಿನ ಸಮಯದಲ್ಲೂ ಚೀನಾ ಮೋದಿ ಅವರನ್ನು ಏಕೆ ಹೊಗಳುತ್ತಿದೆ ಎಂದು ಸೋಮವಾರವಷ್ಟೇ ರಾಹುಲ್ ಪ್ರಶ್ನೆ ಕೇಳಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು