ಭಾನುವಾರ, ಸೆಪ್ಟೆಂಬರ್ 22, 2019
22 °C
‘ರಾಹುಲ್ ಗಾಂಧಿಯನ್ನು ಪ್ರಧಾನಿಯಾಗಿ ಒಪ್ಪಿಕೊಳ್ಳಲು ತಯಾರಿದ್ದೇವೆ’

ಹೇಗಾದರೂ ಸರಿ ನರೇಂದ್ರ ಮೋದಿಯನ್ನು ಅಧಿಕಾರದಿಂದ ದೂರವಿಡಬೇಕು: ಟಿಎಂಸಿ

Published:
Updated:

ನವದೆಹಲಿ: ‘ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗಿ ಒಪ್ಪಿಕೊಳ್ಳಲು ತಯಾರಿದ್ದೇವೆ. ಹೇಗಾದರೂ ಸರಿ ನರೇಂದ್ರ ಮೋದಿಯನ್ನು ಅಧಿಕಾರದಿಂದ ದೂರವಿಡಬೇಕು’ ಎಂದು ತೃಣಮೂಲ ಕಾಂಗ್ರೆಸ್‌ ಮೂಲಗಳು ಹೇಳಿವೆ.

ಚುನಾವಣಾ ಫಲಿತಾಂಶದ ನಂತರ ಪ್ರಧಾನಿಯನ್ನು ಆಯ್ಕೆ ಮಾಡಲು ವಿರೋಧ ಪಕ್ಷಗಳು ಯೋಜಿಸಿವೆ. ಆದರೆ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂದು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಪ್ರಸ್ತಾಪವಿರಿಸಿದ್ದಾರೆ. ವಿರೋಧ ಪಕ್ಷಗಳಲ್ಲಿ ಪ್ರಧಾನಿ ಹುದ್ದೆಯ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ, ಯಾರೂ ಈವರೆಗೆ ಬಹಿರಂಗವಾಗಿ ಇದನ್ನು ಘೋಷಿಸಿಲ್ಲ.

‘ಮೋದಿಯನ್ನು ಅಧಿಕಾರದಿಂದ ದೂರವಿಡಲು ಪ್ರಾದೇಶಿಕ ಪಕ್ಷಗಳು ಒಂದಾಗುತ್ತಿವೆ. ಈ ಪ್ರಕ್ರಿಯೆಯಲ್ಲಿ ಮಮತಾ ಬ್ಯಾನರ್ಜಿ ಅವರು ಮಹತ್ವದ ಪಾತ್ರ ವಹಿಸಲಿದ್ದಾರೆ. ರಾಹುಲ್ ಅವರೇ ಪ್ರಧಾನಿಯಾಗಬೇಕು ಎಂದು ಸ್ಟಾಲಿನ್ ಒತ್ತಾಯಿಸಿದರೆ, ನಮಗೆ ಯಾವುದೇ ತೊಂದರೆ ಇಲ್ಲ’ ಎಂದು ಪಕ್ಷದ ಮೂಲಗಳು ಹೇಳಿವೆ.

Post Comments (+)