ಸೋಮವಾರ, ಜೂಲೈ 6, 2020
27 °C

ಆರ್ಥಿಕ ಪ್ಯಾಕೇಜ್‌ ಮರುಪರಿಶೀಲಿಸಲು ಪ್ರಧಾನಿ ಮೋದಿಗೆ ರಾಹುಲ್‌ ಮನವಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆರ್ಥಿಕ ಪ್ಯಾಕೇಜ್‌ ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮನವಿ ಮಾಡಿದ್ದಾರೆ. 

‘ಇಂದು ಬಡವರಿಗೆ ಹಣದ ಅಗತ್ಯ ಇದೆ. ಹಾಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ(ಎಂಜಿಎನ್‌ಆರ್‌ಇಜಿಎ) ಅವರಿಗೆ 200 ದಿನಗಳ ಕೆಲಸವನ್ನು ನೀಡಬೇಕು. ಜೊತೆಗೆ ರೈತರಿಗೆ ಹಣವನ್ನು ನೇರವಾಗಿ ಬ್ಯಾಂಕ್‌ ಖಾತೆ ವರ್ಗಾವಣೆ ಮಾಡಬೇಕು’ ಆಗ್ರಹಿಸಿದ್ದಾರೆ. 

ಹಣ ನೀಡದಿರಲು ಕಾರಣ ರೇಟಿಂಗ್‌ಗಳು ಎಂದು ನಾನು ಕೇಳಿದ್ದೇನೆ. ಇಂದು ನಾವು ವಿತ್ತೀಯ ಕೊರತೆಯನ್ನು ಹೆಚ್ಚಿಸಿದರೆ, ವಿದೇಶಿ ಏಜೆನ್ಸಿಗಳು ನಮ್ಮ ರೇಟಿಂಗ್‌ಗಳನ್ನು ಕಡಿಮೆ ಮಾಡುತ್ತವೆ ಎಂದು ಹೇಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. 

ಇದನ್ನೂ ಓದಿ... ಅರ್ಥಿಕತೆಗೆ ಚೈತನ್ಯ | ಸ್ವಾವಲಂಬನೆಗೆ ₹20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ ಮೋದಿ

ಕೋವಿಡ್‌–19 ಪಿಡುಗಿನಿಂದ ತತ್ತರಿಸಿರುವ ಭಾರತದ ಅರ್ಥ ವ್ಯವಸ್ಥೆಗೆ ಚೈತನ್ಯ ತುಂಬುವಂತಹ ನಿಟ್ಟಿನಲ್ಲಿ ಪ್ರಧಾನಿ ಮೋದಿ, ₹20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್‌ ಘೋಷಿಸಿದ್ದಾರೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು