ಭಾನುವಾರ, ಜುಲೈ 3, 2022
27 °C

ಮೋದಿ ಮರಳಿದರೆ ರಾಹುಲ್‌ ಹೊಣೆ: ಅರವಿಂದ ಕೇಜ್ರಿವಾಲ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ : ‘ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಮರಳಿದರೆ ಅದಕ್ಕೆ ರಾಹುಲ್‌ ಗಾಂಧಿ ಅವರೇ ಹೊಣೆಗಾರರು’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಶುಕ್ರವಾರ ಹೇಳಿದರು.

ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅವರು, ‘ರಾಹುಲ್‌ಗಾಂಧಿ ಅವರು ಉತ್ತರಪ್ರದೇಶದಲ್ಲಿ ಎಸ್‌ಪಿ–ಬಿಎಸ್‌ಪಿ ಮೈತ್ರಿ, ಕೇರಳದಲ್ಲಿ ಎಡರಂಗ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌, ರಾಜಧಾನಿಯಲ್ಲಿ ಎಎಪಿಗೆ ಧಕ್ಕೆ ಉಂಟು ಮಾಡಿದ್ದಾರೆ’ ಎಂದು ದೂರಿದರು.

‘ಕಾಂಗ್ರೆಸ್‌ ಪಕ್ಷವು ಬಿಜೆಪಿ ವಿರೋಧಿ ಪಕ್ಷಗಳ ವಿರುದ್ಧವೇ ಚುನಾವಣೆಯಲ್ಲಿ ಸ್ಪರ್ಧೆ ನಡೆಸುತ್ತಿರುವಂತಿದೆ’ ಎಂದು ಹೇಳಿದರು.

‘ಮೋದಿಗೆ ಹೋಲಿಸಿದರೆ ಮನಮೋಹನ್‌ ಸಿಂಗ್‌ ಅವರು ಸಾವಿರ ಪಟ್ಟು ಉತ್ತಮ ಪ್ರಧಾನಿ. ಈ ಚುನಾವಣೆಯ ಬಳಿಕ ಬಿಜೆಪಿ ಮರಳಿ ಅಧಿಕಾರಕ್ಕೆ ಬರುವುದಿಲ್ಲ. ನಮ್ಮ ಏಕೈಕ ಗುರಿ ಮೋದಿ, ಶಾ ಅಧಿಕಾರಕ್ಕೆ ಮರಳದಂತೆ ತಡೆಯುವುದು’ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು