ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ್ದು ವಿಫಲ ಲಾಕ್‌ಡೌನ್: ಪ್ರಕರಣಗಳ ಏರಿಳಿತ ಮುಂದಿಟ್ಟು ರಾಹುಲ್‌ ಆರೋ‍ಪ

ಅಕ್ಷರ ಗಾತ್ರ

ನವದೆಹಲಿ: ಕೋವಿಡ್-19 ಅನ್ನು ಎದುರಿಸಲು ಕೇಂದ್ರ ಸರ್ಕಾರ ಕೈಗೊಂಡ ಲಾಕ್‌ಡೌನ್ ಕಾರ್ಯತಂತ್ರವನ್ನು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದ ಲಾಕ್‌ಡೌನ್ ವಿಫಲವಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವಾಗ ಲಾಕ್‌ಡೌನ್ ಅನ್ನು ಸಡಿಲಗೊಳಿಸಿದ ಏಕೈಕ ದೇಶ ಭಾರತ ಎಂದು ಈ ಹಿಂದೆ ಹೇಳಿದ್ದ ರಾಹುಲ್, ನಾಲ್ಕು ದೇಶಗಳ ಲಾಕ್‌ಡೌನ್ ಮತ್ತು ಕೋವಿಡ್–19 ಪ್ರಕರಣಗಳ ಜೊತೆ ಭಾರತದ ಲಾಕ್‌ಡೌನ್ ಹೋಲಿಕೆ ಮಾಡಿರುವ ಗ್ರಾಫ್ ಟ್ವೀಟ್ ಮಾಡಿದ್ದಾರೆ. ವಿಫಲವಾದ ಲಾಕ್‌ಡೌನ್ ಈ ರೀತಿ ಕಾಣುತ್ತದೆ ಎಂದಿದ್ದಾರೆ.

ಆರಂಭದಲ್ಲಿ ಕೊರೊನಾ ವೈರಸ್ ದಾಳಿಗೆ ತುತ್ತಾಗಿದ್ದ ಸ್ಪೇನ್, ಜರ್ಮನಿ, ಇಟಲಿ ಹಾಗೂ ಬ್ರಿಟನ್‌ನಲ್ಲಿ ಲಾಕ್‌ಡೌನ್ ಘೋಷಣೆಯಾದ ನಂತರ ಪ್ರಕರಣಗಳು ಇಳಿಮುಖವಾಗಿವೆ. ಆದರೆ ಭಾರತದಲ್ಲಿ ಮಾತ್ರ ಲಾಕ್‌ಡೌನ್ ಸಮಯದಲ್ಲಿ ಹೆಚ್ಚಳವಾದ ಸೋಂಕು, ಲಾಕ್‌ಡೌನ್‌ ತೆರವು ನಂತರವೂ ಸೋಂಕು ತೀವ್ರವಾಗಿದೆ ಎಂದಿದ್ದಾರೆ.

ಭಾರತದಲ್ಲಿ ಹೇರಲಾಗಿರುವ ಲಾಕ್‌ಡೌನ್ ವಿಫಲವಾಗಿದ್ದು, ಇದು ಕೋವಿಡ್-19 ಸೋಂಕು ಪ್ರಕರಣಗಳ ಇಳಿಕೆಗೆ ಸಹಾಯ ಮಾಡಿಲ್ಲ ಎಂದು ಕಾಂಗ್ರೆಸ್ ನಾಯಕರು ದೂರಿದ್ದರು.

ಕೇಂದ್ರ ಆರೋಗ್ಯ ಸಚಿವಾಲಯದ ಶನಿವಾರದ ಮಾಹಿತಿ ಪ್ರಕಾರ, ದೇಶದಲ್ಲಿ ಒಂದೇ ದಿನ 9,887 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗುವುದರೊಂದಿಗೆ 294 ಜನರು ಮೃತಪಟ್ಟಿದ್ದರು. ಈ ಮೂಲಕ ಸೋಂಕಿತರ ಸಂಖ್ಯೆ 2,36,657ಕ್ಕೆ ಏರಿಕೆಯಾಗಿದ್ದರೆ, ಒಟ್ಟಾರೆ 6,642 ಜನರು ಮೃತಪಟ್ಟಿದ್ದಾರೆ.

ಸೋಂಕಿತರ ಸಂಖ್ಯೆಯಲ್ಲಿ ಭಾರತ ಇಟಲಿಯನ್ನು ಹಿಂದಿಕ್ಕಿ ಆರನೇ ಸ್ಥಾನದಲ್ಲಿದೆ. ಅಮೆರಿಕ, ಬ್ರೆಜಿಲ್, ರಷ್ಯಾ, ಇಂಗ್ಲೆಂಡ್, ಸ್ಪೇನ್ ಮತ್ತು ಇಟಲಿಯ ನಂತರ ಏಳನೇ ಸ್ಥಾನದಲ್ಲಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT