ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತ್ಯಜಿಸುವುದಿಲ್ಲ: ರಣದೀಪ್ ಸುರ್ಜೇವಾಲಾ

Last Updated 12 ಜೂನ್ 2019, 11:01 IST
ಅಕ್ಷರ ಗಾತ್ರ

ನವದೆಹಲಿ: ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು, ಅಧ್ಯಕ್ಷರಾಗಿದ್ದಾರೆ, ಇನ್ನು ಮುಂದೆಯೂ ಅದೇ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ನಂತರ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತ್ಯಜಿಸಲು ರಾಹುಲ್ ಗಾಂಧಿ ಮುಂದಾಗಿದ್ದರು. ಆದರೆ ಅಧ್ಯಕ್ಷ ಸ್ಥಾನ ತ್ಯಜಿಸಬೇಡಿ ಎಂದು ಕಾಂಗ್ರೆಸ್ ಪಕ್ಷದ ನಾಯಕರು ಒತ್ತಾಯಿಸಿದ್ದರು.

ಕಾಂಗ್ರೆಸ್‌ನ ಹಿರಿಯ ನಾಯಕರು ಬುಧವಾರ ನವದೆಹಲಿಯಲ್ಲಿ ಸಭೆ ಸೇರಿ ಚರ್ಚಿಸಿದ ನಂತರ ಸುರ್ಜೇವಾಲಾ ರಾಹುಲ್ ಅವರನಿರ್ಧಾರವನ್ನುತಿಳಿಸಿದ್ದಾರೆ. ಹಿರಿಯ ನೇತಾರ ಎ.ಕೆ.ಆ್ಯಂಟನಿ ನೇತೃತ್ವದ ಸಭೆಯಲ್ಲಿ ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಾಗಿ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆದಿದೆ.

ಈ ಸಭೆಯಲ್ಲಿ ಅಹಮದ್ ಪಟೇಲ್, ಮಲ್ಲಿಕಾರ್ಜುನಖರ್ಗೆ, ಗುಲಾಂ ನಬಿ ಆಜಾದ್,ಪಿ. ಚಿದಂಬರಂ, ಕೆ.ಸಿ. ವೇಣುಗೋಪಾಲ್, ಸುರ್ಜೇವಾಲ, ಜೈರಾಂ ರಮೇಶ್ ಮತ್ತು ಆನಂದ ಶರ್ಮಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT