ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ರಾಹುಲ್‌ ಗಾಂಧಿಗೆ ಹುಟ್ಟುಹಬ್ಬದ ಶುಭಾಶಯ

ಶುಕ್ರವಾರ, ಜೂಲೈ 19, 2019
22 °C

ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ರಾಹುಲ್‌ ಗಾಂಧಿಗೆ ಹುಟ್ಟುಹಬ್ಬದ ಶುಭಾಶಯ

Published:
Updated:

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಅವರಿಗೆ ಶುಭಾಶಯ ಕೋರಿದ್ದಾರೆ.

‘ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸು ದೊರೆಯಲಿ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಯಾಗಿ, ‘ಶುಭಾಶಯ ಕೋರಿದ್ದಕ್ಕೆ ಧನ್ಯವಾದಗಳು ಮೋದಿಜಿ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

‘ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸು ದೊರೆಯಲಿ. ಜವಾಬ್ದಾರಿ ಮತ್ತು ಅಭಿವೃದ್ಧಿಯ ಕುರಿತಾದ ಅವರ ಬದ್ಧತೆ ಪಕ್ಷಕ್ಕೆ ಮಾರ್ಗದರ್ಶಕ ಶಕ್ತಿಯಾಗಿದೆ’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬುಧವಾರ ಬೆಳಿಗ್ಗೆ ಕಾಂಗ್ರೆಸ್‌ ಪ್ರಧಾನ ಕಚೇರಿಗೆ ಆಗಮಿಸಿದ ರಾಹುಲ್ ಅವರಿಗೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಶುಭಾಶಯ ಕೋರಿದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. ಟ್ವಿಟರ್‌ನಲ್ಲಿ #IAmRahulGandhi,#HappyBirthdayRahulGandhi, #RahulJi #RahulGandhiJi ಹ್ಯಾಷ್‌ಟ್ಯಾಗ್‌ಗಳು ಟ್ರೆಂಡಿಂಗ್ ಆಗಿವೆ.

ಬರಹ ಇಷ್ಟವಾಯಿತೆ?

 • 15

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !