ಎಎಪಿ–‘ಕೈ’ ಮೈತ್ರಿ: ಇಂದು ಮಾತುಕತೆ

ಶುಕ್ರವಾರ, ಏಪ್ರಿಲ್ 26, 2019
24 °C
ಉಭಯ ಪಕ್ಷಗಳ ನಾಯಕರ ನಡುವೆ ಇಂದು ಮಾತುಕತೆ

ಎಎಪಿ–‘ಕೈ’ ಮೈತ್ರಿ: ಇಂದು ಮಾತುಕತೆ

Published:
Updated:

ನವದೆಹಲಿ: ದೆಹಲಿಯಲ್ಲಿ ಮೈತ್ರಿ ಮಾಡಿಕೊಳ್ಳುವ ಸಂಬಂಧ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳ ನಡುವೆ ಮಂಗಳವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆಯಿದೆ. ಇಲ್ಲಿನ 7 ಸ್ಥಾನಗಳಿಗೆ ಮೇ 12ರಂದು ಮತದಾನ ನಿಗದಿಯಾಗಿದ್ದು, ಆಯೋಗ ಇನ್ನಷ್ಟೇ ಅಧಿಸೂಚನೆ ಹೊರಡಿಸಬೇಕಿದೆ.

ಆದರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಸೋಮವಾರ ಟ್ವಿಟರ್‌ನಲ್ಲಿ ವಾಗ್ಯುದ್ಧ ನಡೆಸಿದರು. ಮೈತ್ರಿ ವಿಚಾರದಲ್ಲಿ ಎಎಪಿ ಯುಟರ್ನ್ ತೆಗೆದುಕೊಳ್ಳುತ್ತಿದೆ ಎಂದು ರಾಹುಲ್ ಆರೋಪಿಸಿದರು. ಇದಕ್ಕೆ ತಿರುಗೇಟು ನೀಡಿದ ಕೇಜ್ರಿವಾಲ್, ಮಾತುಕತೆ ಇನ್ನೂ ಪ್ರಗತಿಯಲ್ಲಿರುವಾಗ ಯುಟರ್ನ್ ಮಾತೆಲ್ಲಿ ಎಂದು ಪ್ರಶ್ನಿಸಿದ್ದಾರೆ.

ಏಳರಲ್ಲಿ ನಾಲ್ಕು ಸ್ಥಾನಗಳನ್ನು ಎಎಪಿಗೆ ಬಿಟ್ಟುಕೊಡುವುದಾಗಿ ರಾಹುಲ್ ಟ್ವೀಟ್ ಮಾಡಿದ್ದಾರೆ. ‘ಕಳೆದ ಬಾರಿ ಏಳೂ ಕ್ಷೇತ್ರಗಳಲ್ಲಿ ಗೆದ್ದಿದ್ದ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ’ ಎಂದು ಅವರು ಹೇಳಿದ್ದಾರೆ. 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !