ಸೋಮವಾರ, ಸೆಪ್ಟೆಂಬರ್ 16, 2019
29 °C

‘ದೆಹಲಿಯಲ್ಲಿ ಪ್ರಿಯಾಂಕಾ ಪ್ರಚಾರ ಏಕೆ?’

Published:
Updated:

ನವದೆಹಲಿ: ‘ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಚುನಾವಣಾ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾ ಗಾಂಧಿ ಅವರು ದೆಹಲಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ರ್‍ಯಾಲಿಗಳನ್ನು ಆಯೋಜಿಸುತ್ತಾ ಸಮಯ ವ್ಯರ್ಥ ಮಾಡುತ್ತಿದ್ದಾರೆ’ ಎಂದು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಟೀಕಿಸಿದ್ದಾರೆ.

ದೆಹಲಿಯಲ್ಲಿ ಪ್ರಚಾರ ಕಾರ್ಯ ಆರಂಭಿಸಿರುವ ಪ್ರಿಯಾಂಕಾ ಅವರು, ದೆಹಲಿ ಈಶಾನ್ಯ ಹಾಗೂ ದೆಹಲಿ ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರ ಸಭೆ, ರೋಡ್‌ ಷೋಗಳನ್ನು ನಡೆಸಲಿದ್ದಾರೆ.

‘ರಾಜಸ್ಥಾನ, ಮಧ್ಯಪ್ರದೇಶದಂಥ ರಾಜ್ಯಗಳಲ್ಲಿ ಬಿಜೆಪಿ– ಕಾಂಗ್ರೆಸ್‌ ನಡುವೆ ನೇರ ಸ್ಪರ್ಧೆ ಇದೆ. ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಅವರು ಈ ರಾಜ್ಯಗಳಿಗೆ ಹೋಗಿ ಪ್ರಚಾರ ನಡೆಸುವುದಿಲ್ಲವೇಕೆ? ದೆಹಲಿಯಲ್ಲಿ ಅವರು ಸಮಯ ವ್ಯರ್ಥ ಮಾಡುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಎಸ್‌ಪಿ–ಬಿಎಸ್‌ಪಿ ವಿರುದ್ಧ, ದೆಹಲಿಯಲ್ಲಿ ಎಎಪಿ ವಿರುದ್ಧ ರ್‍ಯಾಲಿಗಳನ್ನು ನಡೆಸುತ್ತಿದ್ದಾರೆ. ಪ್ರಿಯಾಂಕಾ ಮತ್ತು ರಾಹುಲ್‌ ಅವರು ಬಿಜೆಪಿ ಜೊತೆ ನೇರ ಸ್ಪರ್ಧೆ ಇರುವ ರಾಜ್ಯಗಳಿಗೆ ಯಾಕೆ ಹೋಗುತ್ತಿಲ್ಲ’ ಎಂದು ಕೇಜ್ರಿವಾಲ್‌ ಪ್ರಶ್ನಿಸಿದರು.

Post Comments (+)