ಶನಿವಾರ, ಜುಲೈ 31, 2021
27 °C

ಗುಜರಾತ್‌ ಮಾದರಿ ಬಣ್ಣ ಬಯಲು: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ‌ ಟೀಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಕೊರೊನಾ ಸೋಂಕು ಪ್ರಸರಣವನ್ನು ತಡೆಯುವಲ್ಲಿ ಗುಜರಾತ್‌ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಗುಜರಾತ್‌ ಮಾದರಿ ಎಂಬುದರ ಬಣ್ಣ ಬಯಲಾಗಿದೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಂಗಳವಾರ ಟೀಕಿಸಿದ್ದಾರೆ.

ಕೊರೊನಾ ಸೋಂಕು ಪ್ರಸರಣ ನಿರ್ವಹಣೆಗೆ ಸಂಬಂಧಿಸಿ ಈವರೆಗೆ ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದ ರಾಹುಲ್‌ ಗಾಂಧಿ ಈಗ ಗುಜರಾತ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

‘ಕೋವಿಡ್‌–19ನಿಂದಾಗಿ ಗುಜರಾತ್‌ನಲ್ಲಿ ಹೆಚ್ಚು ಸಾವು ಸಂಭವಿಸಿವೆ. ಗುಜರಾತ್‌ನಲ್ಲಿ ಮರಣ ಪ್ರಮಾಣ ಶೇ 6.25 ಇದ್ದರೆ, ಮಹಾರಾಷ್ಟ್ರದಲ್ಲಿ ಶೇ 3.73, ರಾಜಸ್ಥಾನ– ಶೇ 2.32, ಪಂಜಾಬ್‌– ಶೇ2.17, ಪುದುಚೇರಿ– ಶೇ 1.98, ಜಾರ್ಖಂಡ್‌– ಶೇ 0.5 ಹಾಗೂ ಛತ್ತೀಸಗಡದಲ್ಲಿ ಶೇ 0.35ರಷ್ಟಿದೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಗುಜರಾತ್‌ನಲ್ಲಿ ಮರಣ ಪ್ರಮಾಣ ಹೆಚ್ಚಿದೆ ಎಂಬ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಯನ್ನು ಸಹ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. 

ಗುಜರಾತ್‌ನಲ್ಲಿ 24,055 ಪ್ರಕರಣಗಳು ವರದಿಯಾಗಿದ್ದು 4ನೇ ಸ್ಥಾನದಲ್ಲಿದೆ. ಈವರೆಗೆ 1,505 ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು