ಮೋದಿ ಸರ್ಕಾರದ ವಿರುದ್ಧ ಆರೋಪಗಳ ಮಳೆ

7
ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ರಾಹುಲ್‌ ಗಾಂಧಿ

ಮೋದಿ ಸರ್ಕಾರದ ವಿರುದ್ಧ ಆರೋಪಗಳ ಮಳೆ

Published:
Updated:
Deccan Herald

ಬೀದರ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈಯ್ಯುವ ಮೂಲಕ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ ಇಲ್ಲಿ ಆಯೋಜಿಸಿದ್ದ ಜನ ಧ್ವನಿ ಸಮಾವೇಶದಲ್ಲಿ ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದರು.

ನೆಹರೂ ಕ್ರೀಡಾಂಗಣದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಸುಮಾರು ಅರ್ಧಗಂಟೆ ಮಾತನಾಡಿದ ಅವರು, ಭಾಷಣದುದ್ದಕ್ಕೂ ಎನ್‌ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

‘ಬೆಂಗಳೂರಿನ ಎಚ್‌ಎಎಲ್‌ 70 ವರ್ಷಗಳಿಂದ ವಿಮಾನ ತಯಾರಿಕೆಯಲ್ಲಿ ತೊಡಗಿಸಿಕೊಂಡಿದ್ದರೂ ಮೋದಿ ಅವರು ಕಳ್ಳಮಾರ್ಗದಿಂದ ಫ್ರಾನ್ಸ್‌ ಜತೆ ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದ ಮಾಡಿಕೊಂಡಿದ್ದಾರೆ. ದೇಶದ ಚೌಕೀದಾರ್‌ ಎಂದು ಹೇಳಿಕೊಂಡು ಭ್ರಷ್ಟಾಚಾರದಲ್ಲಿ ಭಾಗಿದಾರ ಆಗಿದ್ದಾರೆ’ ಎಂದು ಕುಟುಕಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ಕಾರ್ಯದರ್ಶಿ ಸಾಕೆ ಶೈಲಜನಾಥ್‌, ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸಂಸದ ವೀರಪ್ಪ ಮೊಯಿಲಿ, ಡಾ.ಜಿ.ಪರಮೇಶ್ವರ, ಸಚಿವರಾದ ಡಿ.ಕೆ.ಶಿವಕುಮಾರ್‌, ರಾಜಶೇಖರ ಪಾಟೀಲ, ಪ್ರಿಯಾಂಕ್ ಖರ್ಗೆ, ಶಾಸಕರಾದ ಎಂ.ಬಿ.ಪಾಟೀಲ, ಎಚ್.ಕೆ.ಪಾಟೀಲ ಪಾಲ್ಗೊಂಡಿದ್ದರು.

****

ರಫೇಲ್‌ ಕುರಿತು ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ. ಮೋದಿ ಅವರಿಗೆ 56 ಇಂಚಿನ ಎದೆ ಇದ್ದರೆ, ಧೈರ್ಯ ಇದ್ದರೆ ನನ್ನ ಕಣ್ಣಲ್ಲಿ ಕಣ್ಣು ಇಟ್ಟು ಮಾತನಾಡಲು ಮುಂದೆ ಬರಲಿ.

-ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ

ಬರಹ ಇಷ್ಟವಾಯಿತೆ?

 • 25

  Happy
 • 6

  Amused
 • 3

  Sad
 • 3

  Frustrated
 • 11

  Angry

Comments:

0 comments

Write the first review for this !