ಜಿ–20 ರಾಷ್ಟ್ರಗಳ ರಾಯಭಾರಿಗಳ ಜೊತೆ ರಾಹುಲ್‌, ಸೋನಿಯಾ ಚರ್ಚೆ

ಬುಧವಾರ, ಮಾರ್ಚ್ 27, 2019
22 °C

ಜಿ–20 ರಾಷ್ಟ್ರಗಳ ರಾಯಭಾರಿಗಳ ಜೊತೆ ರಾಹುಲ್‌, ಸೋನಿಯಾ ಚರ್ಚೆ

Published:
Updated:
Prajavani

ನವದೆಹಲಿ (ಪಿಟಿಐ): ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಹಿರಿಯ ನಾಯಕರಾದ ಸೋನಿಯಾ ಗಾಂಧಿ ಹಾಗೂ ಮನಮೋಹನ್‌ ಸಿಂಗ್‌ ಅವರು ಜಿ–20 ಸದಸ್ಯ ರಾಷ್ಟ್ರಗಳ ರಾಯಭಾರಿಗಳಿಗೆ ಬುಧವಾರ ಔತಣಕೂಟ ಏರ್ಪಡಿಸಿದ್ದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಔತಣಕೂಟಕ್ಕೆ ಮಹತ್ವ ಬಂದಿದೆ. ‘ಆರ್ಥಿಕ ಮತ್ತು ರಾಜಕೀಯ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಪಕ್ಷದ ನಿಲುವುಗಳನ್ನು ಈ ರಾಯಭಾರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು’ ಎಂದು ಮೂಲಗಳು ತಿಳಿಸಿವೆ.

ಈ ಔತಣಕೂಟಕ್ಕೆ ಪಾಕಿಸ್ತಾನದ ಹೈ ಕಮಿಷನರ್‌ಗೆ ಆಹ್ವಾನ ಇರಲಿಲ್ಲ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 4

  Angry

Comments:

0 comments

Write the first review for this !