ಶುಕ್ರವಾರ, ಫೆಬ್ರವರಿ 28, 2020
19 °C

ಎಲ್‌ಪಿಜಿ ದರ ಇಳಿಸಲು ರಾಹುಲ್‌ ಗಾಂಧಿ ಆಗ್ರಹ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಗೃಹಬಳಕೆ ಅಡುಗೆ ಅನಿಲದ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಬಿಜೆಪಿಯನ್ನು ಮಾತಿನಲ್ಲೇ ತಿವಿದಿದ್ದಾರೆ. 

ಯುಪಿಎ ಆಡಳಿತದ ಅವಧಿಯಲ್ಲಿ ಎಲ್‌ಪಿಜಿ ದರ ಏರಿಕೆಯ ವಿರುದ್ಧ ಸ್ಮೃತಿ ಇರಾನಿ ಸೇರಿದಂತೆ ಬಿಜೆಪಿ ಪಕ್ಷದ ನಾಯಕರು ಪ್ರತಿಭಟನೆ ನಡೆಸುತ್ತಿದ್ದ ಚಿತ್ರವೊಂದನ್ನು ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, ‘ಶೀಘ್ರವೇ ದರ ಏರಿಕೆಯನ್ನು ಹಿಂಪಡೆಯಿರಿ’ ಎಂದು ಆಗ್ರಹಿಸಿದ್ದಾರೆ. 

‘ಅಡುಗೆ ಅನಿಲದ ದರ ₹150ರವರೆಗೆ ಏರಿಕೆಯಾಗಿರುವುದರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ನನ್ನ ಬೆಂಬಲವಿದೆ’ ಎಂದು ರಾಹುಲ್‌ ಕಾಲೆಳೆದಿದ್ದಾರೆ. ಟ್ವೀಟ್‌ಗೆ #RollBackHike ಹ್ಯಾಷ್‌ ಬಳಸಿದ್ದಾರೆ. ಬುಧವಾರ (ಫೆ.12) ಪ್ರತಿ ಅಡುಗೆ ಅನಿಲ ಸಿಲಿಂಡರ್‌ ದರವನ್ನು ₹144.5 ಹೆಚ್ಚಳ ಮಾಡಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು