ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಇ ಪ್ರವೇಶಾತಿ ಗೊಂದಲ ದಾಖಲಾತಿ ಪರಿಶೀಲಿಸುವಂತೆ ಆದೇಶ

Last Updated 26 ಏಪ್ರಿಲ್ 2018, 19:39 IST
ಅಕ್ಷರ ಗಾತ್ರ

ಬೆಂಗಳೂರು: ಆರ್‌ಟಿಇ ಅಡಿ ತಕ್ಷಣ ದಾಖಲಾತಿ ಮಾಡಿಕೊಂಡು ಶಾಲೆಗಳು ಆನ್‌ಲೈನ್‌ನಲ್ಲಿ ಮಾಹಿತಿಯನ್ನು ಅಪ್‌ಡೇಟ್‌ ಮಾಡಬೇಕು. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗಮನ ಹರಿಸಿ ಯಾವುದೇ ಗೊಂದಲಗಳಾಗದಂತೆ ಗಮನಹರಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಲವು ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು ಆರ್‌.ಟಿ.ಇ. ಕಾಯ್ದೆ ಅಡಿ ಪ್ರವೇಶವನ್ನು ನಿರಾಕರಣೆ/ವಿಳಂಬ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆ ಮೂಲಕ ಈಗಾಗಲೇ 1,11,548 ಮಕ್ಕಳಿಗೆ ಸೀಟು ಹಂಚಿಕೆ ಮಾಡಲಾಗಿದೆ. ಅರ್ಜಿಯಲ್ಲಿ ಆಯ್ಕೆ ಮಾಡದ ಶಾಲೆಗಳಿಗೂ ಸೀಟು ಹಂಚಿಕೆ ಆಗಿರುವ ಬಗ್ಗೆ ಪೋಷಕರು ದೂರು ಸಲ್ಲಿಸುತ್ತಿದ್ದು ಪರಿಹಾರ ನೀಡಲಾಗುತ್ತಿದೆ. ಇಲಾಖೆಯ bit.ly/2r2GiIc ಲಿಂಕ್‌ನಲ್ಲಿ ದೂರುಗಳನ್ನು ಸಲ್ಲಿಸಲು ಅವಕಾಶ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT