ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌

Last Updated 16 ನವೆಂಬರ್ 2018, 10:13 IST
ಅಕ್ಷರ ಗಾತ್ರ

ನವದೆಹಲಿ:ರಾಜಸ್ಥಾನ ವಿಧಾನಸಭೆಗೆಡಿಸೆಂಬರ್‌ 07ರಂದು ನಡೆಯಲಿರುವ ಚುನಾವಣೆಗೆ 152 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್‌ ಬಿಡುಗಡೆ ಮಾಡಿದೆ.

ಪಕ್ಷದ ಕೇಂದ್ರ ಚುನಾವಣಾ ಸಮಿತಿ ಕಾರ್ಯದರ್ಶಿ ಮುಖುಲ್‌ ವಾಸ್ನಿಕ್‌ ಗುರುವಾರ ತಡರಾತ್ರಿ ಪಟ್ಟಿ ಬಿಡುಗಡೆ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರು ಸರ್ದಾರ್ ಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಪಕ್ಷದ ರಾಜ್ಯಘಟಕದ ಅಧ್ಯಕ್ಷ ಸಚಿನ್‌ ಪೈಲಟ್‌ ಅವರು ಟಾಂಕ್‌ನಿಂದ ಕಣಕ್ಕಿಳಿಯಲಿದ್ದಾರೆ.

ಬಿಜೆಪಿ ತೊರೆದುಇತ್ತೀಚೆಗೆ ಕಾಂಗ್ರೆಸ್‌ ಸೇರಿದ್ದ ಸಂಸದ ಹರೀಶ್‌ ಮೀನಾ ಅವರೂ ಟಿಕೆಟ್‌ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ದಿಯೋಲಿ ಉನಿಯಾರದಿಂದ ಸ್ಪರ್ಧಿಸಲಿದ್ದಾರೆ.

ಉಳಿದಂತೆ ರಾಜಸ್ಥಾನ ವಿಧಾನಸಭೆ ವಿರೋಧ ಪಕ್ಷದ ನಾಯಕ ರಾಮೇಶ್ವರ ಲಾಲ್‌ ದುಡಿ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಮುಖ್ಯಸ್ಥೆ ಗಿರಿಜಾ ವ್ಯಾಸ್‌, ಹಿರಿಯ ನಾಯಕ ಸಿ.ಪಿ.ಜೋಷಿ ಪಟ್ಟಿಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT