ಶನಿವಾರ, ಏಪ್ರಿಲ್ 4, 2020
19 °C

ಕಾರು–ಟ್ರಕ್‌ ಡಿಕ್ಕಿ: 11 ಮಂದಿ ಸ್ಥಳದಲ್ಲೇ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೋಧಪುರ: ಶೇಘಡದ ಸೋಯಿಂತಾರ ಗ್ರಾಮದ ಬಳಿ ಶನಿವಾರ ಕಾರು ಮತ್ತು ಟ್ರಕ್‌ ಮಧ್ಯೆ ಡಿಕ್ಕಿ ಸಂಭವಿಸಿ, ನವ ವಿವಾಹಿತ ದಂಪತಿ ಸೇರಿದಂತೆ ಒಟ್ಟು 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

‘ದೇವರ ದರ್ಶನ ಪಡೆಯಲು ದಂಪತಿ ವಿಕ್ರಮ್‌ ಹಾಗೂ ಸೀತಾ ಜೊತೆ ಕುಟುಂಬಸ್ಥರು, ಭಲೋತ್ರಾ ದಿಂದ ಬರಮೇರ್‌ಗೆ ಹೋಗುವ ದಾರಿ ಮಧ್ಯೆ ಈ ಅಪಘಾತ ನಡೆದಿದೆ. ಇದರಲ್ಲಿ 11 ಮಂದಿ ಸ್ಥಳದಲ್ಲಿ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಜೋಧಪುರ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು. 

‘ತಕ್ಷಣವೇ ಘಟನಾ ಸ್ಥಳಕ್ಕಾಗಮಿಸಿದ ಸ್ಥಳೀಯರು ಕಾರಿನಲ್ಲಿ ಸಿಲುಕಿದ್ದವರನ್ನು ಹೊರ ತೆಗೆಯುವಲ್ಲಿ ಸಹಾಯ ಮಾಡಿದರು. ಕ್ರೇನ್‌ನ ಸಹಾಯದಿಂದ ವಾಹನಗಳನ್ನು ಬೇರ್ಪಡಿಸಿ, ಮೃತ ದೇಹಗಳನ್ನು ಹೊರ ತೆಗೆಯಲಾಯಿತು’ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು