ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ: ಗಡಿಯೊಳಗೆ ನುಸುಳಿದ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಸೇನೆ

Last Updated 10 ಮಾರ್ಚ್ 2019, 5:47 IST
ಅಕ್ಷರ ಗಾತ್ರ

ನವದೆಹಲಿ:ರಾಜಸ್ಥಾನದ ಗಂಗನಗರ ಜಿಲ್ಲೆಯ ಗಡಿಯಲ್ಲಿ ಶನಿವಾರ ಸಂಜೆಮತ್ತೊಂದು ಪಾಕಿಸ್ತಾನದ ಮಾನವ ರಹಿತ ವೈಮಾನಿಕ ವಾಹನ(ಯುಎವಿ) ಯನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಬಾಲಾಕೋಟ್‌ನಲ್ಲಿ ಜೈಷ್‌ ಉಗ್ರರ ಶಿಬಿರದ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿದ ಬಳಿಕ ಭಾರತದ ಗಡಿಯೊಳಗೆ ಪತ್ತೆಯಾಗಿರುವ ಎರಡನೇ ಡ್ರೋನ್‌ ಇದು.

ಗಡಿಯಲ್ಲಿನ ಭಾರತೀಯ ಸೇನೆಯ ಚಟುವಟಿಕೆಗಳ ಮೇಲೆ ಕಣ್ಣಿಡಲು ಕ್ಯಾಮೆರಾ ಹೊಂದಿರುವ ಡ್ರೋನ್‌ಗಳನ್ನು ಪಾಕಿಸ್ತಾನ ಗಡಿಯಲ್ಲಿ ಹಾರಾಟ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿದ್ದಾಗಿ ವರದಿಯಾಗಿದೆ.

ಫೆಬ್ರುವರಿ 26ರಂದು ಗುಜರಾತ್‌ನ ಕಚ್‌ ಸಮೀಪದ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಯುಎವಿಯವನ್ನು ಭಾರತೀಯ ಭದ್ರತಾ ಪಡೆ ಹೊಡೆದುರುಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT