’ರಾಜೀವ್ ಹತ್ಯೆ: ಆರೋಪಿಗಳ ಬಿಡುಗಡೆಗೆ ಕೇಂದ್ರಕ್ಕೆ ವರದಿ ನೀಡಿಲ್ಲ’

7

’ರಾಜೀವ್ ಹತ್ಯೆ: ಆರೋಪಿಗಳ ಬಿಡುಗಡೆಗೆ ಕೇಂದ್ರಕ್ಕೆ ವರದಿ ನೀಡಿಲ್ಲ’

Published:
Updated:

ಚೆನ್ನೈ: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಪ್ರಕರಣದ ಏಳು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಮಾಡಿರುವ ಶಿಫಾರಸನ್ನು ರಾಜ್ಯಪಾಲರು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ ಎಂಬುದಾಗಿ ಮಾಧ್ಯಮಗಳಲ್ಲಿ ಬಂದಿರುವ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ತಿಳಿಸಿದ್ದಾರೆ. ‌

ಈ ವಿಷಯದಲ್ಲಿ ಸಂವಿಧಾನಕ್ಕೆ ಅನುಗುಣವಾಗಿ ನ್ಯಾಯೋಚಿತವಾದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

‘ಕೇಂದ್ರ ಗೃಹ ಸಚಿವಾಲಯಕ್ಕೆ ಯಾವುದೇ ವರದಿಯನ್ನು ಕಳುಹಿಸಿಲ್ಲ. ಇದೊಂದು ಸಂಕೀರ್ಣವಾದ ಹಾಗೂ ಕಾನೂನಿನ ಪರಿಶೀಲನೆಗೆ ಒಳಪಟ್ಟಿರುವ ವಿಷಯ ಆಗಿರುವುದರಿಂದ ಸಂವಿಧಾನ ಬದ್ಧವಾಗಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ’ ಎಂದು ರಾಜಭವನದ ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !