ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಜಪೇಯಿಗೆ ಅನಾರೋಗ್ಯ: ರಾಜನಾಥ್ ಸಿಂಗ್, ಅಮಿತ್ ಶಾ ಆಸ್ಪತ್ರೆಗೆ ಭೇಟಿ

Last Updated 11 ಆಗಸ್ಟ್ 2018, 19:58 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಏಮ್ಸ್‌ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿರುವಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಏಮ್ಸ್‌ ನಿರ್ದೇಶಕ ರಣದೀಪ್‌ ಗುಲೇರಿಯಾ ಅವರ ಮೇಲುಸ್ತುವಾರಿಯಲ್ಲಿ ವಾಜಪೇಯಿ ಅವರ ಆರೋಗ್ಯ ತಪಾಸಣೆ ನಡೆಯುತ್ತಿದೆ.

ಸಂಜೆ 6.30ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂರಾತ್ರಿ 8.15ಕ್ಕೆ ಗೃಹ ಸಚಿವ ರಾಜನಾಥ್ ಸಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ವಾಜಪೇಯಿ ಅವರಿಗೆ ಡಯಾಲಿಸಿಸ್‌ ಮಾಡಲಾಗಿದ್ದು, ಮೂತ್ರಪಿಂಡದ ಸೋಂಕು ನಿಯಂತ್ರಣಕ್ಕೆ ಬಂದಿದ್ದು, ಸಹಜವಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದು ಗುಲೇರಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

93 ವಯಸ್ಸಿನ ವಾಜಪೇಯಿ ಅವರು ಮೂತ್ರಪಿಂಡ ಮತ್ತು ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ. ಕಳೆದ ಜೂನ್ 11 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT