ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ ಭದ್ರತಾ ಪರಿಸ್ಥಿತಿ ಅವಲೋಕಿಸಿದ ರಾಜನಾಥ್‌ ಸಿಂಗ್‌

ಅಧಿಕಾರಿಗಳ ಜತೆ ಸಮಾಲೋಚನೆ
Last Updated 19 ಫೆಬ್ರುವರಿ 2019, 20:15 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಭದ್ರತಾ ಪರಿಸ್ಥಿತಿಯ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಮಂಗಳವಾರ ಹಿರಿಯ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

ಭಾರತ ಮತ್ತು ಪಾಕಿಸ್ತಾನ ಗಡಿ ಮತ್ತು ಕಣಿವೆ ರಾಜ್ಯದಲ್ಲಿಯ ಭದ್ರತೆಯ ಬಗ್ಗೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿ
ದರು. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೊಭಾಲ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಹೊಸದಾಗಿ ಯಾವುದೇ ಅಹಿತಕರ ಘಟನೆ ವರದಿಯಾಗದ ಹಿನ್ನೆಲೆಯಲ್ಲಿ ಜಮ್ಮುವಿನಲ್ಲಿ ಮಂಗಳವಾರ ಎರಡು ತಾಸು ಕರ್ಫ್ಯೂ ಸಡಿಲಿಸಲಾಗಿತ್ತು.

ಯೋಧರ ಹೆಸರು ಹಚ್ಚೆ: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರು ಸೇರಿ 71 ಹುತಾತ್ಮ ಯೋಧರ ಹೆಸರನ್ನು
ರಾಜಸ್ಥಾನದ ಬಿಕಾನೆರ್‌ ಯುವಕನೊಬ್ಬ ಹಚ್ಚೆ ಹಾಕಿಸಿಕೊಂಡಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT