ಬುಧವಾರ, ಅಕ್ಟೋಬರ್ 21, 2020
24 °C

ಗೃಹಸಚಿವ ರಾಜನಾಥ್‌ ಸಿಂಗ್ ಕಣಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಖನೌ: ಕೇಂದ್ರ ಗೃಹಸಚಿವ ರಾಜನಾಥ್‌ ಸಿಂಗ್ ಅವರು ನಗರದಲ್ಲಿ ಮಂಗಳವಾರ ಭರ್ಜರಿ ರೋಡ್‌ಶೋ ನಡೆಸಿ ಲೋಕಸಭಾ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಅಪಾರ ಬೆಂಬಲಿಗರ ಜೊತೆ ಮೆರವಣಿಗೆ ನಡೆಸಿದ ಅವರು ನಾಮಪತ್ರ ಸಲ್ಲಿಸಿದರು.

ಉತ್ತರ ಪ್ರದೇಶ ಬಿಜೆಪಿ ಘಟಕದ ಮುಖ್ಯಸ್ಥ ಮಹೇಂದ್ರನಾಥ ಪಾಂಡೆ, ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಮತ್ತು ಮಾಜಿ ಕೇಂದ್ರ ಸಚಿವ ಕಲ್‌ರಾಜ್ ಮಿಶ್ರಾ ಅವರು ರಾಜನಾಥ್‌ ಜೊತೆಗಿದ್ದರು.

ಲಖನೌ ನಗರಕೇಂದ್ರದ ಹಜರತ್‌ಗಂಜ್‌ ರಸ್ತೆಯಲ್ಲಿ ಸಾಗುತ್ತಿದ್ದ ಮೆರವಣಿಗೆ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು. ಇಲ್ಲಿನ ದಕ್ಷಿಣಮುಖಿ ಹನುಮಾನ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು. ಆಠವಲೆ ಅವರ ರಿಪಬ್ಲಿಕನ್ ಪಾರ್ಟಿಯ ಕಾರ್ಯಕರ್ತರು ಬೆಂಬಲ ಸೂಚಿಸಿದರು. ರ‍್ಯಾಲಿಯಲ್ಲಿ ಭಾಗಿಯಾಗಿದ್ದ ಒಂಟೆಗಳ ಜೊತೆ ಕಾರ್ಯಕರ್ತರು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ದೃಶ್ಯ ಕಂಡುಬಂದಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು