ಭಾನುವಾರ, ಮಾರ್ಚ್ 29, 2020
19 °C

ದೇಶ ರಕ್ಷಣೆಗಾಗಿ ಸಶಸ್ತ್ರಪಡೆಗಳು ಗಡಿ ದಾಟಲು ಹಿಂಜರಿಯುವುದಿಲ್ಲ: ರಾಜನಾಥ್ ಸಿಂಗ್

ಪಿಟಿಐ Updated:

ಅಕ್ಷರ ಗಾತ್ರ : | |

Rajnath Singh

ನವದೆಹಲಿ: ‘ದೇಶವನ್ನು ರಕ್ಷಿಸುವ ಸಲುವಾಗಿ ಭಾರತೀಯ ಸಶಸ್ತ್ರಪಡೆಗಳು ಈಗ ಗಡಿಯನ್ನು ದಾಟಲು ಹಿಂಜರಿಯುವುದಿಲ್ಲ’ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. 

ಬಾಲಾಕೋಟ್ ವಾಯುದಾಳಿಯ ಮೊದಲ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಯೋತ್ಪಾದನೆಯನ್ನು ಎದುರಿಸುವ ವಿಧಾನದಲ್ಲಿ ಭಾರತ ಬದಲಾವಣೆ ಕಂಡುಕೊಂಡಿದೆ. ಈ ಬದಲಾವಣೆ ತಂದಿದ್ದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ಹೇಳಿದರು. 

‘2016ರ ಸರ್ಜಿಕಲ್ ಸ್ಟ್ರೈಕ್ ಮತ್ತು 2019ರ ಬಾಲಾಕೋಟ್ ವಾಯುದಾಳಿಗಳು ಬದಲಾವಣೆಗೆ ಸಾಕ್ಷಿಯಾಗಿವೆ. ಇದು ಖಂಡಿತವಾಗಿಯೂ ಹೊಸ ಮತ್ತು ವಿಶ್ವಾಸಾರ್ಹ ಭಾರತ’ ಎಂದೂ ರಾಜನಾಥ್ ಸಿಂಗ್ ತಮ್ಮ ಸರಣಿ ಟ್ವೀಟ್‌ಗಳಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು