ಬುಧವಾರ, ಏಪ್ರಿಲ್ 1, 2020
19 °C

ರಾಜ್ಯಸಭೆ ಚುನಾವಣೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಕೊರೊನಾ ವೈರಸ್‌ ಸೋಂಕಿನ ಕಾರಣ ದೇಶದಲ್ಲಿ ಮೂಡಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮಾರ್ಚ್ 26ರಂದು ರಾಜ್ಯಸಭೆಯ ವಿವಿಧ ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆಯನ್ನು ಕೇಂದ್ರ ಚುನಾವಣಾ ಅಯೋಗ ಮುಂದೂಡಿದೆ.

ಒಟ್ಟು 55 ಸ್ಥಾನಗಳ ಚುನಾವಣೆ ನಡೆಯಬೇಕಿದ್ದು, ಈ ಪೈಕಿ 37 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಉಳಿದ 18 ಸ್ಥಾನಗಳಿಗೆ ಆಂಧ್ರಪ್ರದೇಶ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಮಣಿಪುರ, ಮೇಘಾಲಯ, ರಾಜಸ್ಥಾನಗಳಿಂದ ಚುನಾವಣೆ ನಡೆಯ
ಬೇಕಿತ್ತು. ಈ ರಾಜ್ಯಗಳಲ್ಲಿ ಆಯಾ ರಾಜ್ಯ ಸರ್ಕಾರಗಳು ಲಾಕ್‌ಡೌನ್‌ ಘೋಷಿಸಿವೆ. 

ಪರಿಸ್ಥಿತಿಯನ್ನು ಅವಲೋಕಿಸಿ ಚುನಾವಣೆಯ ಪರಿಷ್ಕೃತ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಆಯೋಗದ ಹೇಳಿಕೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು