ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಭಯ ಸದನ ಭಾಷಣದಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆಗಳ ಬಣ್ಣಿಸಿದ ರಾಷ್ಟ್ರಪತಿ

Last Updated 31 ಜನವರಿ 2019, 13:08 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು, ಗುರುವಾರ ಆರಂಭವಾದ ಬಜೆಟ್ ಅಧಿವೇಶನದಲ್ಲಿ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ್ದು, ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಉಲ್ಲೇಖಿಸಿದ್ದಾರೆ. ರಫೇಲ್‌ ಯುದ್ಧವಿಮಾನ, ನಿರ್ದಿಷ್ಟ ದಾಳಿ, ಈಶಾನ್ಯಭಾರತದ ಅಭಿವೃದ್ಧಿ ಸೇರಿದಂತೆ ಹಲವು ವಿಷಯಗಳ ಕುರಿತು ಅವರು ಮಾತನಾಡಿದ್ದಾರೆ.

ಭಾಷಣದ ಪ್ರಮುಖ ಅಂಶಗಳು...

* ರಫೇಲ್ ಯುದ್ಧವಿಮಾನ ವಾಯುಪಡೆಗೆ ಸೇರ್ಪಡೆಗೊಳ್ಳಲು ಸಿದ್ಧವಾಗಿದ್ದು, ಹಲವು ದಶಕಗಳ ನಂತರ, ಅತ್ಯಾಧುನಿಕ ಹೊಸ ತಲೆಮಾರಿನ ಯುದ್ಧವಿಮಾನವನ್ನು ಸ್ವಾಗತಿಸಲು ವಾಯುಪಡೆ ಸಜ್ಜಾಗಿದೆ.

* ಗಡಿಯಲ್ಲಿ ಭಯೋತ್ಪಾದಕ ನೆಲೆಗಳ ಮೇಲೆ ನಿರ್ದಿಷ್ಟ ದಾಳಿ ನಡೆಸುವ ಮೂಲಕ, ಭಾರತ ತನ್ನ ಹೊಸ ನಿಯಮ ಮತ್ತು ತಾಂತ್ರಿಕ ನಿಲುವನ್ನು ಪ್ರದರ್ಶಿಸಿದೆ.

* ಕಳೆದ ನಾಲ್ಕು ವರ್ಷಗಳಲ್ಲಿ, ವಿದೇಶಗಳಲ್ಲಿ ಸಿಲುಕಿದ್ದ 2.26 ಲಕ್ಷ ಭಾರತೀಯರನ್ನು ರಕ್ಷಿಸಿ, ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ.

* ಪೂರ್ವ ಹಾಗೂ ಈಶಾನ್ಯ ರಾಜ್ಯಗಳು ದೇಶದ ಹೊಸ ‘ಅಭಿವೃದ್ಧಿ ಎಂಜಿನ್‌ಗಳಾಗುವ’ ಸಾಮರ್ಥ್ಯ ಹೊಂದಿವೆ ಎಂದು ಕೇಂದ್ರ ಸರ್ಕಾರ ಭಾವಿಸುತ್ತದೆ.

* ಸಾರಿಗೆ ಮತ್ತು ಪ್ರವಾಸೋದ್ಯಮದ ಮೂಲಕ ಈಶಾನ್ಯ ರಾಜ್ಯಗಳಲ್ಲಿ ಬದಲಾವಣೆ ತರಲು ಕಾರ್ಯನಿರ್ವಹಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT