ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್‌ಎಸ್‌ ಸಭೆಯಲ್ಲಿ ರಾಮ ಮಂದಿರ ವಿವಾದ ಚರ್ಚೆ

Last Updated 12 ನವೆಂಬರ್ 2018, 18:51 IST
ಅಕ್ಷರ ಗಾತ್ರ

ವಾರಣಾಸಿ: ಇಲ್ಲಿ ಆರಂಭವಾದ ಐದು ದಿನಗಳ ಆರ್‌ಎಸ್‌ಎಸ್‌ ಸಭೆಯಲ್ಲಿ ರಾಮ ಮಂದಿರ ಮತ್ತು ಧರ್ಮಸಭಾ ಆಯೋಜಿಸುವ ಕುರಿತು ಪ್ರಮುಖವಾಗಿ ಚರ್ಚಿಸಲಾಯಿತು.

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಈ ಎರಡು ವಿಷಯಗಳ ಬಗ್ಗೆ ಸಭೆಯಲ್ಲಿ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿದರು.

ರಾಮ ಮಂದಿರ ನಿರ್ಮಿಸಲು ಶಾಸನ ರೂಪಿಸುವಂತೆ ಕೇಂದ್ರದ ಎನ್‌ಡಿಎ ಸರ್ಕಾರದ ಮೇಲೆ ಒತ್ತಡ ಹೇರಲು ಬೆಂಗಳೂರು, ನಾಗ್ಪುರ ಮತ್ತು ಅಯೋಧ್ಯೆಯಲ್ಲಿ ಧರ್ಮಸಭಾಗಳನ್ನು ಈ ತಿಂಗಳ ಅಂತ್ಯದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.

ಧರ್ಮಸಭಾಗಳು ಯಶಸ್ವಿಯಾಗಿ ನಡೆಯುವಂತೆ ಆರ್‌ಎಸ್‌ಎಸ್‌ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು.

ದೇಶದ ವಿವಿಧ ಭಾಗಗಳ ಸಂಘದ 250 ಹಿರಿಯ ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ.

2019ರಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಕುರಿತು ಅಭಿಪ್ರಾಯಗಳನ್ನು ನೀಡುವಂತೆ ಮೋಹನ್‌ ಭಾಗವತ್‌ ಅವರು ಕಾರ್ಯಕರ್ತರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT