ಶನಿವಾರ, ಜುಲೈ 24, 2021
25 °C

ರಾಮಮಂದಿರ ನಿರ್ಮಾಣ ಕಾಮಗಾರಿ ಆರಂಭ ಮುಂದಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಯೋಧ್ಯೆ, ಉತ್ತರಪ್ರದೇಶ (ಪಿಟಿಐ): ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆರಂಭಿಸುವ ಯೋಜನೆಯನ್ನು ಭಾರತ– ಚೀನಾ ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ಸದ್ಯಕ್ಕೆ ಕೈಬಿಡಲಾಗಿದೆ ಎಂದು ರಾಮ ಮಂದಿರ ಟ್ರಸ್ಟ್‌ ಹೇಳಿದೆ.

‘ಗಡಿಯಲ್ಲಿ ಪರಿಸ್ಥಿತಿ ಬಹಳ ಗಂಭೀರವಾಗಿದ್ದು ಮೊದಲು ನಮಗೆ ದೇಶ ಮುಖ್ಯ’ ಎಂದು ಟ್ರಸ್ಟ್‌ನ ಪ್ರಕಟಣೆ ತಿಳಿಸಿದೆ.

ಗಾಲ್ವನ್‌ ಕಣಿವೆಯಲ್ಲಿ ಭಾರತದ ಯೋಧರು ಹುತಾತ್ಮರಾದ ಬಗ್ಗೆ ಶೋಕ ವ್ಯಕ್ತಪಡಿಸಿರುವ ಟ್ರಸ್ಟ್‌, ಮಂದಿರ ನಿರ್ಮಾಣ ಆರಂಭಿಸುವ ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಹೇಳಿದೆ. ಕಳೆದ ವರ್ಷ ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪಿನ ಬಳಿಕ ರಾಮ ಮಂದಿರ ನಿರ್ಮಿಸುವ ಹೊಣೆಗಾರಿಕೆಯನ್ನು ಟ್ರಸ್ಟ್‌ ವಹಿಸಿಕೊಂಡಿದೆ.

ದೇಶದಲ್ಲಿನ ಪರಿಸ್ಥಿತಿ ನೋಡಿಕೊಂಡು ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಟ್ರಸ್ಟ್‌ನ ಸದಸ್ಯ ಅನಿಲ್‌ ಮಿಶ್ರಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಈ ಮಧ್ಯೆ ಚೀನಾ ವಿರುದ್ಧ ವಿವಿಧ  ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಹಿಂದೂ ಮಹಾಸಭಾದ ಕಾರ್ಯಕರ್ತರು ಚೀನಾ ಧ್ವಜವನ್ನು ದಹಿಸಿದ್ದರೆ, ವಿಶ್ವ ಹಿಂದೂ ಪರಿಷತ್,‌ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಪ್ರತಿಕೃತಿ ದಹನ ಮಾಡಿದೆ ಅಲ್ಲದೆ ಚೀನಾ ಉತ್ಪನ್ನಗಳನ್ನು ನಾಶಪಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು