ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವೈರಸ್‌: ಚಿಕಿತ್ಸಾ ಸೌಲಭ್ಯ ಹೆಚ್ಚಿಸಲು ಪ್ರಿಯಾಂಕಾ ಗಾಂಧಿ ಸಲಹೆ

Last Updated 10 ಏಪ್ರಿಲ್ 2020, 17:00 IST
ಅಕ್ಷರ ಗಾತ್ರ

ನವದೆಹಲಿ: ‘ಕೊರೊನಾ ಚಿಕಿತ್ಸಾ ಸೌಲಭ್ಯಗಳನ್ನು ಹೆಚ್ಚಿಸಬೇಕು, ದೊಡ್ಡ ರಾಜ್ಯದಲ್ಲಿ ಇಂಥ ಕ್ರಮಗಳು ಜನರ ಜೀವ ಉಳಿಸಲು
ನೆರವಾಗುತ್ತದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.

ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಪತ್ರ ಬರೆದಿರುವ ಅವರು, ‘ರಾಜಕೀಯ ಸಿದ್ಧಾಂತಗಳನ್ನು
ಬದಿಗಿಟ್ಟು, ಜನರು ಸ್ವಯಂಪ್ರೇರಣೆಯಿಂದ ಸೋಂಕು ತಪಾಸಣೆಗೆ ಬರಲು ಪ್ರೇರೇಪಿಸಬೇಕು’ ಎಂದು ಹೇಳಿದ್ದಾರೆ.

‘ಭಯ-ಮುಕ್ತ ವಾತಾವರಣ ಸೃಷ್ಟಿಸುವ ಮೂಲಕ ಜನರ ವಿಶ್ವಾಸವನ್ನು ಗೆಲ್ಲುವಂತಹ ಕ್ರಮಗಳನ್ನು ತೆಗೆದುಕೊಂಡಾಗ ಜನರು
ತಾವಾಗಿಯೇ ತಪಾಸಣೆಗೆ ಬರುತ್ತಾರೆ’ ಎಂದಿದ್ದಾರೆ.

‘ಸಾಧ್ಯವಾದಷ್ಟು ಹೆಚ್ಚಿನ ಪ್ರಮಾಣದಲ್ಲಿ ಜನರ ತಪಾಸಣೆ ನಡೆಸುವ ಮೂಲಕ ಮಾತ್ರವೇ ಈ ಸಮಸ್ಯೆಯಿಂದ ಹೊರಬರಲು ಸಾಧ್ಯ.
ಕ್ವಾರಂಟೈನ್‌ ಮತ್ತು ಐಸೊಲೇಷನ್‌ ವಾರ್ಡ್‌ಗಳನ್ನು ಹೆಚ್ಚಿಸಬೇಕು’ ಎಂದು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT