ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಂಜನ್ ಗೊಗೋಯಿ ಮುಂದಿನ ಸಿಜೆಐ?

Last Updated 1 ಸೆಪ್ಟೆಂಬರ್ 2018, 18:39 IST
ಅಕ್ಷರ ಗಾತ್ರ

ನವದೆಹಲಿ:ನ್ಯಾಯಮೂರ್ತಿ ರಂಜನ್ ಗೊಗೋಯಿ ಅವರುಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ (ಚೀಫ್ ಜಸ್ಟಿಸ್ ಆಫ್ ಇಂಡಿಯಾ– ಸಿಜೆಐ) ನೇಮಕವಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಅಕ್ಟೋಬರ್ 2ರಂದು ನಿವೃತ್ತರಾಗಲಿದ್ದಾರೆ. ಅವರು ನಿವೃತ್ತರಾಗುವ ಒಂದು ತಿಂಗಳು ಮೊದಲು, ಮುಂದಿನ ಮುಖ್ಯ ನ್ಯಾಯಮೂರ್ತಿ ಯಾರಾಗಬೇಕು ಎಂದು ಶಿಫಾರಸು ಮಾಡಬೇಕು.ಈ ಸಂಬಂಧ ಕಾನೂನು ಸಚಿವಾಲಯವು ಈಗಾಗಲೇ ದೀಪಕ್ ಮಿಶ್ರಾ ಅವರಿಗೆ ಪತ್ರ ಬರೆದಿದೆ. ತಮ್ಮ ಶಿಫಾರಸನ್ನು ತಿಳಿಸಿ ಎಂದು ಸಚಿವಾಲಯವು ಮಿಶ್ರಾ ಅವರನ್ನು ಕೋರಿದೆ.

ಗೊಗೋಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ.ಮಿಶ್ರಾ ಅವರು ಸೇವಾ ಜೇಷ್ಠತೆ ಆಧಾರದಲ್ಲಿ ಗೊಗೋಯಿ ಅವರ ಹೆಸರನ್ನೇ ಶಿಫಾರಸು ಮಾಡಬೇಕಾಗುತ್ತದೆ.

ಆ ಶಿಫಾರಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದರೆ, ಗೊಗೋಯಿ ಅವರೇ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ. ಅಕ್ಟೋಬರ್ 3ರಂದು ಅವರು ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ವಿವರಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT