ಬುಧವಾರ, ನವೆಂಬರ್ 20, 2019
26 °C

ಚಿನ್ಮಯಾನಂದ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

Published:
Updated:

ಶಾಹಜಹಾಂಪುರ: ವಿದ್ಯಾರ್ಥಿನಿ ಮೇಲೆ ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಮತ್ತು ಹಣ ವಸೂಲಿ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್‌ಐಟಿ) 4,700 ಪುಟಗಳ ಬೃಹತ್‌ ಆರೋಪಪಟ್ಟಿ ಸಲ್ಲಿಸಿದೆ.

ಮುಖ್ಯ ಜ್ಯೂಡಿಷಿಯಲ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಈ ಆರೋಪಪಟ್ಟಿ ಸಲ್ಲಿಸಲಾಗಿದೆ. ತನಿಖೆ ಸಂದರ್ಭದಲ್ಲಿ ಎಸ್‌ಐಟಿ 105 ಮಂದಿಯ ಹೇಳಿಕೆಗಳು ಮತ್ತು 55 ದಾಖಲೆಗಳನ್ನು ಸಂಗ್ರಹಿಸಲಾಗಿದೆ.

ಪ್ರತಿಕ್ರಿಯಿಸಿ (+)