ಶುಕ್ರವಾರ, ಜೂನ್ 25, 2021
21 °C

ರ‍್ಯಾಪ್‌ ಗಾಯಕಿ ಹಾರ್ಡ್‌ ಕೌರ್‌ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾರಾಣಸಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮತ್ತು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ` ಪೋಸ್ಟ್‌ ಮಾಡಿದ ಲಂಡನ್‌ನ ರ‍್ಯಾಪ್‌ ಗಾಯಕಿ ತರನ್‌ ಕೌರ್‌ ಧಿಲ್ಲೋನ್‌ ಅಲಿಯಾಸ್ ಹಾರ್ಡ್‌ ಕೌರ್‌ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ವಕೀಲ ಶಶಾಂಕ್‌ ಶೇಖರ್‌ ಎಂಬುವರು ನೀಡಿರುವ ಲಿಖಿತ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಕಂಟೋನ್ಮೆಂಟ್‌ ಪೊಲೀಸ್‌ ಠಾಣೆಯ ಠಾಣಾಧಿಕಾರಿ ವಿಜಯ್‌ ಪ್ರತಾಪ್‌ ಸಿಂಗ್‌ ತಿಳಿಸಿದ್ದಾರೆ.

‘ಗ್ಲಾಸ್ಸಿ‘ ಮತ್ತು ‘ಮೂವ್‌ ಯುವರ್‌ ಬಾಡಿ‘ ಹಾಡುಗಳಿಂದ ಕೌರ್‌ ಖ್ಯಾತರಾಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು