ಭಾನುವಾರ, ಜನವರಿ 17, 2021
28 °C

ಕಾಂಗ್ರೆಸ್ ಸೇರಿದ ಸ್ಮೃತಿ ಇರಾನಿ ಆಪ್ತ ರವಿ ದತ್ ಮಿಶ್ರಾ

ಎಎನ್‍ಐ Updated:

ಅಕ್ಷರ ಗಾತ್ರ : | |

ಅಮೇಠಿ: ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ಆಪ್ತ ರವಿ ದತ್ ಮಿಶ್ರಾ ಗುರುವಾರ ಕಾಂಗ್ರೆಸ್  ಸೇರಿದ್ದಾರೆ. ಸ್ಮೃತಿ ತಮ್ಮ ಚುನಾವಣಾ ಕ್ಷೇತ್ರಕ್ಕೆ ಭೇಟಿ ನೀಡಿದಾಗಲೆಲ್ಲಾ ಮಿಶ್ರಾ ಅವರ ಮನೆಯಲ್ಲೇ ವಾಸ್ತವ್ಯ ಹೂಡುತ್ತಿದ್ದರು.

ಸ್ಮೃತಿ ಇರಾನಿಯವರನ್ನು ಅಮೇಠಿಗೆ ಕರೆ ತಂದಿದ್ದೇ ಮಿಶ್ರಾ ಎಂದು ಹೇಳಲಾಗುತ್ತಿದೆ.ಈ ಹಿಂದೆ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ದ ನೇತೃತ್ವದ ಸರ್ಕಾರದಲ್ಲಿ ಮಿಶ್ರಾ ಸಚಿವರಾಗಿದ್ದರು. ಕಾಂಗ್ರೆಸ್ ಅಧ್ಯಕ್ಷ  ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅಮೇಠಿಯಲ್ಲಿ ಚುನಾವಣಾ ಪ್ರವಾಸ ಮಾಡುತ್ತಿದ್ದಾಗ ಮಿಶ್ರಾ ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದ್ದರು. 

ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅಮೇಠಿ ಮತ್ತು ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಅಮೇಠಿಯಲ್ಲಿ ಸ್ಮೃತಿ ಇರಾನಿ, ರಾಹುಲ್ ಗಾಂಧಿಯ ಪ್ರತಿಸ್ಪರ್ಧಿಯಾಗಿದ್ದಾರೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು