ಬುಧವಾರ, ಜನವರಿ 29, 2020
30 °C

ಅತ್ಯಾಚಾರ: 2 ತಿಂಗಳಲ್ಲಿ ತನಿಖೆ ಮುಗಿಸಲು ಪತ್ರ: ರವಿಶಂಕರ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಟ್ನಾ: ಅತ್ಯಾಚಾರ ಪ್ರಕರಣಗಳು ತ್ವರಿತವಾಗಿ ವಿಲೇವಾರಿ ಆಗಬೇಕು ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ. ಅತ್ಯಾಚಾರ ಮತ್ತು ಪೋಕ್ಸೊ ಕಾಯ್ದೆ ಅಡಿಯಲ್ಲಿ ದಾಖಲಾಗುವ ಪ್ರಕರಣಗಳ ತನಿಖೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆಯುವುದಾಗಿಯೂ ತಿಳಿಸಿದ್ದಾರೆ.  

ಇಂತಹ ಪ್ರಕರಣಗಳ ವಿಚಾರಣೆ ಕೂಡ ಆರು ತಿಂಗಳಲ್ಲಿ ಪೂರ್ಣಗೊಳ್ಳಬೇಕು ಎಂದೂ ಅವರು ಹೇಳಿದ್ದಾರೆ. 

ಅತ್ಯಾಚಾರ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ದುರದೃಷ್ಟಕರ. ಇಂತಹ ಹೀನ ಕೃತ್ಯಗಳನ್ನು ಎಸಗಿದವರಿಗೆ ನ್ಯಾಯಾಂಗ ಪ್ರಕ್ರಿಯೆ ಮೂಲಕ ತ್ವರಿತವಾಗಿ ಶಿಕ್ಷೆಯಾಗಬೇಕು ಎಂದರು. 

***

ಅತ್ಯಾಚಾರ ಪ್ರಕರಣಗಳ ವಿಚಾರಣೆ ಬಾಕಿ ಇದ್ದರೆ ಅವುಗಳನ್ನು ತ್ವರಿತಗತಿ ಕೋರ್ಟ್‌ಗಳಲ್ಲಿ ವಿಲೇವಾರಿ ಮಾಡುವಂತೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆಯುತ್ತೇನೆ 

–ರವಿಶಂಕರ್‌ ಪ್ರಸಾದ್‌, ಕೇಂದ್ರದ ಕಾನೂನು ಸಚಿವ

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು