ಬುಧವಾರ, ಮೇ 27, 2020
27 °C

ರೆಪೊ ದರ ಕಡಿತದಿಂದ ಮಧ್ಯಮ ವರ್ಗ ಮತ್ತು ವ್ಯವಹಾರಗಳಿಗೆ ಸಹಕಾರ: ನರೇಂದ್ರ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಆರ್ಥಿಕತೆಯ ಮೇಲೆ ಕೊರೊನಾವೈರಸ್‌ನಿಂದಾಗಿರುವ ನಕಾರಾತ್ಮಕ ಪರಿಣಾಮ ಹೊರೆಯನ್ನು ತಗ್ಗಿಸಲು ರೆಪೊ ದರವನ್ನು ಕಡಿತಗೊಳಿಸಿರುವುದು (ಆರ್‌ಬಿಐ ಬ್ಯಾಂಕ್‌ಗಳಿಗೆ ನೀಡುವ ಸಾಲದ ಮೇಲಿನ ಬಡ್ಡಿದರ) 'ಮಧ್ಯಮ ವರ್ಗ ಮತ್ತು ವ್ಯವಹಾರಗಳಿಗೆ' ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕೊರೊನಾವೈರಸ್ ಪ್ರಭಾವದಿಂದಾಗಿ ನಮ್ಮ ಆರ್ಥಿಕತೆಯನ್ನು ಕಾಪಾಡಲು ಆರ್‌ಬಿಐ ದೊಡ್ಡ ಕ್ರಮಗಳನ್ನು ತೆಗೆದುಕೊಂಡಿದೆ. ಇದು ಹಣದ ಹರಿವನ್ನು  ಸುಧಾರಿಸುತ್ತದೆ, ಸಾಲದ ಹೊರೆ ಕಡಿತಗೊಳಿಸುತ್ತೆ, ಮಧ್ಯಮ ವರ್ಗ ಮತ್ತು ವ್ಯವಹಾರಗಳಿಗೆ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ರಿವರ್ಸ್‌ ರೆಪೊ ದರ 90 ಅಂಶ ಕಡಿತಗೊಳಿಸಿದ್ದು, ಶೇ 4ರಷ್ಟು ನಿಗದಿ ಪಡಿಸಿರುವುದಾಗಿ ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌. ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು (ಎಂಪಿಸಿ) ಸಭೆ ನಡೆಸಿ ಈ ನಿರ್ಧಾರ ಪ್ರಕಟಿಸಲಾಗಿದೆ. 

ಆರ್‌ಬಿಐ ಮುಖ್ಯಸ್ಥರು ತನ್ನ ಹಣಕಾಸು ನೀತಿ ಸಮಿತಿ ಸಭೆಯ ನಂತರ ರೆಪೊ ದರದಲ್ಲಿ 75 ಮೂಲ ಅಂಶಗಳನ್ನು ಕಡಿತಗೊಳಿಸುವ ಮೂಲಕ ಶೇ 4.4 ಕ್ಕೆ ನಿಗಧಿಪಡಿಸಿದೆ. ಇದು ವಾಣಿಜ್ಯ ಬ್ಯಾಂಕುಗಳಿಗೆ ಆರ್‌ಬಿಐ ಅಲ್ವಾವಧಿಗೆ ನೀಡುವ ಸಾಲದ ಮೇಲಿನ ಬಡ್ಡಿದರವಾಗಿದೆ. ಹಣಕಾಸು ನೀತಿ ಸಮಿತಿಯ ಆರು ಸದಸ್ಯರಲ್ಲಿ ನಾಲ್ವರು ಈ ಕ್ರಮವನ್ನು ಬೆಂಬಲಿಸಿದ್ದಾರೆ.

ಇದುವರೆಗೂ ದೇಶದಲ್ಲಿ ಸುಮಾರು 740 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ವೇಗವಾಗಿ ಹರಡುತ್ತಿರುವುದನ್ನು ತಡೆಯಲು 21 ದಿನ ಲೌಕ್‌ಡೌನ್ ಘೋಷಿಸಿದ ಮೂರನೇ ದಿನ ಆರ್‌ಬಿಐ ತನ್ನ ನಿರ್ಧಾರವನ್ನು ಪ್ರಕಟಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು