ಭಾನುವಾರ, ಸೆಪ್ಟೆಂಬರ್ 20, 2020
23 °C

ದೇಶದ ಮೂಲ ಮೌಲ್ಯಗಳ ರಕ್ಷಣೆಗಾಗಿ ಎಲ್ಲ ತ್ಯಾಗಕ್ಕೆ ಸಿದ್ಧ: ಸೋನಿಯಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಬರೇಲಿ: ದೇಶದ ಮೂಲ ಮೌಲ್ಯಗಳ ರಕ್ಷಣೆಗಾಗಿ ಎಲ್ಲವನ್ನು ತ್ಯಾಗಮಾಡಲು ಸಿದ್ಧಳಿದ್ದೇನೆ ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು. ಪುನರಾಯ್ಕೆ ಮಾಡಿದ ರಾಯಬರೇಲಿ ಕ್ಷೇತ್ರದ ಮತದಾರರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಕುರಿತು ಬರೆದಿರುವ ಪತ್ರದಲ್ಲಿ ಅವರು, ಕ್ಷೇತ್ರದಲ್ಲಿ ತಮ್ಮ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದ ಸಮಾಜವಾದಿ ಪಕ್ಷ, ಬಹುಜನ ಸಮಾಜವಾದಿ ಪಕ್ಷಕ್ಕೆ ಕೃತಜ್ಞತೆ ಸಲ್ಲಿಸಿದರು.

‘ಕಾಂಗ್ರೆಸ್‌ ಪಕ್ಷದ ಹಿರಿಯರು ಹುಟ್ಟುಹಾಕಿದ ಸಂಪ್ರದಾಯ ಎತ್ತಿಹಿಡಿಯಲು, ಮೌಲ್ಯಗಳ ರಕ್ಷಣೆಗೆ ಬದ್ಧಳಿದ್ದೇನೆ. ಇದಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧ’ ಎಂದು ಹೇಳಿದರು.

‘ಬರುವ ದಿನಗಳು ಕಷ್ಟದಿಂದ ಕೂಡಿರುತ್ತವೆ ಎಂಬುದು ನನಗೆ ತಿಳಿದಿದೆ. ನಿಮ್ಮ ವಿಶ್ವಾಸ ಮತ್ತು ಬೆಂಬಲದಿಂದ ಕಾಂಗ್ರೆಸ್‌ ಎಲ್ಲ ಸವಾಲನ್ನೂ ಎದುರಿಸಲಿದೆ’ ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು