ಬುಧವಾರ, ಫೆಬ್ರವರಿ 26, 2020
19 °C

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ರಾಧಾಕೃಷ್ಣ ವಿಖೆ ಪಾಟೀಲ್‌ಗೆ ಸಚಿವ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಇತ್ತೀಚೆಗೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ರಾಧಾಕೃಷ್ಣ ವಿಖೆ ಪಾಟೀಲ್ ಭಾನುವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. 

ಕಾಂಗ್ರೆಸ್‌ನಲ್ಲಿದ್ದ ರಾಧಾಕೃಷ್ಣ ವಿಖೆ ಪಾಟೀಲ್ ಮಹಾರಾಷ್ಟ್ರದ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿ ಜೂನ್‌ 4ರಂದು ಬಿಜೆಪಿಗೆ ಸೇರ್ಪಡೆಯಾಗಿದ್ದರು. 

ಮುಂಬೈನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಧಾಕೃಷ್ಣ ವಿಖೆ ಪಾಟೀಲ್ ಹಾಗೂ ಮುಂಬೈ ಬಿಜೆಪಿ ಘಟಕದ ಅಧ್ಯಕ್ಷರಾದ ಆಶೀಸ್‌ ಸೇಲಾರ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. 

ಭಾನುವಾರ ನಡೆದ ಸಂಪುಟ ವಿಸ್ತರಣೆಯಲ್ಲಿ 13 ಜನರು ಸಚಿವರಾಗಿದ್ದಾರೆ. 2020ರಲ್ಲಿ ಮಹಾರಾಷ್ಟ್ರದ ವಿಧಾನಸಭೆಗೆ ಚುನಾವಣೆ ನಡೆಯಲಿದೆ. 

ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್‌ ನೇತೃತ್ವದ 38 ಸಚಿವರ ಸಂಪುಟದಲ್ಲಿ 22 ಜನ ಹಿರಿಯರು ಹಾಗೂ 16 ಜನ ಕಿರಿಯ ಸಚಿವರಿದ್ದಾರೆ. 

 ರಾಧಾಕೃಷ್ಣ ವಿಖೆ ಪಾಟೀಲ್ ಅವರ ಪುತ್ರ ಸುಜಯ್ ವಿಖೆ ಪಾಟೀಲ್ ಕಳೆದ ಮಾರ್ಚ್‌ ತಿಂಗಳಲ್ಲಿ ಬಿಜೆಪಿ ಸೇರಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು