ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ತಂಡಗಳಿಗೆ ಸಹಕಾರ ನೀಡಲು ಬದ್ಧ: ಪಶ್ಚಿಮ ಬಂಗಾಳ

Last Updated 22 ಏಪ್ರಿಲ್ 2020, 20:19 IST
ಅಕ್ಷರ ಗಾತ್ರ

ನವದೆಹಲಿ: ಲಾಕ್‌ಡೌನ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಎಲ್ಲ ಆದೇಶಗಳನ್ನು ಪಾಲಿಸುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ರಾಜ್ಯದಲ್ಲಿನ ಪರಿಸ್ಥಿತಿ ಅವಲೋಕಿಸಲು ಭೇಟಿ ನೀಡಿರುವ ಕೇಂದ್ರದ ಎರಡು ತಂಡಗಳಿಗೆ ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ತಿಳಿಸಿದೆ.

ಗಂಭೀರ ಪರಿಸ್ಥಿತಿ ಎದುರಿಸುತ್ತಿದ್ದ ಪಶ್ಚಿಮ ಬಂಗಾಳದ ಏಳು ಜಿಲ್ಲೆಗಳಲ್ಲಿನ ಪರಿಸ್ಥಿತಿ ಪರಾಮರ್ಶೆಗೆ ಭೇಟಿ ನೀಡಿದ ಕೇಂದ್ರ ತಂಡಗಳಿಗೆ ಸಹಕಾರ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಮೊದಲು ತಿಳಿಸಿದ್ದರು. ಈ ಮೂಲಕ ಕೇಂದ್ರದ ಜತೆ ಸಂಘರ್ಷಕ್ಕಿಳಿದಿದ್ದರು.

ಈಗ ನಿಲವು ಬದಲಿಸಿರುವ ಪಶ್ಚಿಮ ಬಂಗಾಳ ಸರ್ಕಾರ, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರಿಗೆ ಪತ್ರ ಬರೆದಿದೆ.

‘ಎರಡು ಅಂತರ ಸಚಿವಾಲಯ ಕೇಂದ್ರ ತಂಡಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡಿಲ್ಲ ಎನ್ನುವುದು ಸುಳ್ಳು. ವಿಪತ್ತು ನಿರ್ವಹಣೆ ಕಾಯ್ದೆ ಅಡಿಯಲ್ಲಿ ಕೇಂದ್ರ ಸರ್ಕಾರದ ಆದೇಶ ಮತ್ತು ಸುಪ್ರೀಂ ಕೋರ್ಟ್‌ ನಿರ್ದೇಶನಗಳನ್ನು ಅನುಷ್ಠಾನಗಳಿಸಲು ಬದ್ಧರಾಗಿದ್ದೇವೆ ಎಂದು ಖಚಿತ ಭರವಸೆ ನೀಡುತ್ತಿದ್ದೇವೆ’ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ರಾಜೀವ್‌ ಸಿನ್ಹಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT