ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ: ಒಂದೇ ದಿನ 11,264 ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ

Last Updated 30 ಮೇ 2020, 8:17 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 11,264 ಜನರು ಕೊರೊನಾ ವೈರಸ್‌ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಒಂದೇ ದಿನ 7,964 ಹೊಸ ಕೋವಿಡ್‌–19 ಪ್ರಕರಣಗಳು ದೃಢಪಟ್ಟು 265 ಜನ ಮೃತಪಟ್ಟ ಬೆನ್ನಲೇ ಒಂದೇ ದಿನದಲ್ಲಿ 11,264 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿರುವುದು ಪಾಸಿಟಿವ್ ಬೆಳವಣಿಗೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ದೇಶದಲ್ಲಿ ಈವರೆಗೆ ಒಟ್ಟು 1,73,763 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 4971 ಜನರು ಮೃತಪಟ್ಟಿದ್ದಾರೆ.

86,422 ಪ್ರಕರಣಗಳು ಕ್ರಿಯಾಶೀಲವಾಗಿದ್ದು, 82,370 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇಲ್ಲಿಯವರೆಗೂ ಮಹಾರಾಷ್ಟ್ರದಲ್ಲಿ 2098, ಗುಜರಾತ್‌ನಲ್ಲಿ 980, ದೆಹಲಿಯಲ್ಲಿ 398, ಮಧ್ಯಪ್ರದೇಶದಲ್ಲಿ 334, ಪಶ್ಚಿಮ ಬಂಗಾಳದಲ್ಲಿ 302, ಉತ್ತರ ಪ್ರದೇಶದಲ್ಲಿ 198 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT