ಶುಕ್ರವಾರ, ಜೂಲೈ 10, 2020
22 °C

ಜುಲೈನಲ್ಲಿ ಪರೀಕ್ಷೆ ನಡೆಸಲು ವಿಶ್ವವಿದ್ಯಾಲಯಗಳಿಗೆ ಯುಜಿಸಿ ಶಿಫಾರಸು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌–19 ಪಿಡುಗಿನ ತೀವ್ರತೆ ಹಾಗೂ ಕಾರ್ಯಸಾಧ್ಯತೆಯ ಆಧಾರದ ಮೇಲೆ ಸೆಮಿಸ್ಟರ್‌ ಪರೀಕ್ಷೆಗಳನ್ನು ಜುಲೈನಲ್ಲಿ ನಡೆಸುವಂತೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ವಿಶ್ವವಿದ್ಯಾಲಯಗಳಿಗೆ ಸೂಚಿಸಿದೆ.

ಪರೀಕ್ಷೆಗಳನ್ನು ಆನ್‌ಲೈನ್‌ ಇಲ್ಲವೇ ಆಫ್‌ಲೈನ್‌ ಮೂಲಕ ನಡೆಸಬಹುದು. ಪರೀಕ್ಷಾ ಅವಧಿಯನ್ನು ಮೂರು ಗಂಟೆ ಬದಲಿಗೆ ಎರಡು ಗಂಟೆಗೆ ಕಡಿಮೆ ಮಾಡುವಂತೆಯೂ ಯುಜಿಸಿ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳಲ್ಲಿ ವಿವರಿಸಲಾಗಿದೆ.

ಕೋವಿಡ್‌–19ನ ತೀವ್ರತೆ ಕಡಿಮೆಯಾಗಿರುವಂತಹ ರಾಜ್ಯಗಳಲ್ಲಿ ಇಂಟರ್‌ಮೀಡಿಯೇಟ್‌ ಸೆಮಿಸ್ಟರ್‌ನ ಪರೀಕ್ಷೆಗಳನ್ನು ನಡೆಸಬಹುದು. ಸಾಮಾನ್ಯ ಸ್ಥಿತಿ ಇಲ್ಲ ಎಂದಾದರೆ, ಆಂತರಿಕ ಮೌಲ್ಯಮಾಪನ ಹಾಗೂ ಹಿಂದಿನ ಸೆಮಿಸ್ಟರ್‌ನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಗ್ರೇಡ್‌ ನಿರ್ಧರಿಸಬಹುದು ಎಂದೂ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಲಭ್ಯವಿರುವ ಮೂಲಸೌಕರ್ಯಗಳ ಆಧಾರದ ಮೇಲೆ ಪರೀಕ್ಷೆಗಳನ್ನು ಆಫ್‌ಲೈನ್‌ ಅಥವಾ ಆನ್‌ಲೈನ್‌ ಮೂಲಕ ನಡೆಸುವ ಬಗ್ಗೆ ಆಯಾ ವಿಶ್ವವಿದ್ಯಾಲಯಗಳು ನಿರ್ಧರಿಸಬಹುದು. ಪರೀಕ್ಷೆ ಬರೆಯುವ ಅವಕಾಶ ಪ್ರತಿಯೊಬ್ಬ ವಿದ್ಯಾರ್ಥಿಗೂ ದೊರಕುವಂತೆ ನೋಡಿಕೊಳ್ಳಬೇಕು ಎಂದು ಯುಜಿಸಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು