ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಹಿಂಸಾತ್ಮಕವಾಗಿರಲಿ ಹೋರಾಟ: ರಾಷ್ಟ್ರಪತಿ

ರಾಷ್ಟ್ರಪತಿ ರಾಮನಾಥ ಕೋವಿಂದ್‌ ಕಿವಿಮಾತು
Last Updated 25 ಜನವರಿ 2020, 19:42 IST
ಅಕ್ಷರ ಗಾತ್ರ

ನವದೆಹಲಿ: ‘ಸಕಾರಣಕ್ಕಾಗಿ ನಡೆಯುವ ಹೋರಾಟಗಳು ಅಹಿಂಸಾತ್ಮಕವಾಗಿರಬೇಕು’ ಎಂದು ದೇಶದ ಜನರಿಗೆ, ಯುವಜನತೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಕಿವಿಮಾತು ಹೇಳಿದರು.

ಗಣರಾಜ್ಯೋತ್ಸವದ ಮುನ್ನಾ ದಿನ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ‘ಜಗತ್ತಿಗೆ ಅಹಿಂಸೆಯ ಕೊಡುಗೆಯನ್ನು ಮಹಾತ್ಮಾ ಗಾಂಧಿಯವರು ನೀಡಿದ್ದಾರೆ. ಯಾವುದು ಸರಿ ಯಾವುದು ತಪ್ಪು ಎನ್ನುವುದನ್ನು ನೀವು ನಿರ್ಧರಿಸಬೇಕು. ಸತ್ಯ ಮತ್ತು ಅಹಿಂಸೆಯ ಸಂದೇಶಕ್ಕೆ ತಕ್ಕಂತೆ ನಾವು ನಡೆದುಕೊಳ್ಳುತ್ತಿದ್ದೇವೆಯೇ ಎನ್ನುವುದನ್ನು ಪರಾಮರ್ಶಿಸಿಕೊಳ್ಳಬೇಕು’ ಎಂದರು.

ಶಾಸಕಾಂಗ, ನ್ಯಾಯಾಂಗ ಹಾಗೂ ಕಾರ್ಯಾಂಗವು ನವಭಾರತದ ಪ್ರಮುಖ ಅಂಗವಾಗಿದೆ. ಈ ಮೂರೂ ಅಂಗಗಳು ಪರಸ್ಪರಾವಲಂಬಿಯಾಗಿವೆ. ಆದರೆ ಇಡೀ ರಾಜ್ಯ
ಜನರ ಕೈಯಲ್ಲಿದೆ. ಜನರು ಭಾರತ ಗಣರಾಜ್ಯದ ಪ್ರಮುಖ ಚಾಲನಾಶಕ್ತಿ ಆಗಿದ್ದಾರೆ. ನಮ್ಮ ಭವಿಷ್ಯವನ್ನು ನಿರ್ಧರಿಸುವ ನಿಜವಾದ ಶಕ್ತಿ ನಮ್ಮಲ್ಲಿದೆ’ ಎಂದರು.

ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ರಾಷ್ಟ್ರದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಕೋವಿಂದ್‌ ಅವರು ಈ ಹೇಳಿಕೆ ನೀಡಿದ್ದಾರೆ. ಆದರೆ ಭಾಷಣದಲ್ಲಿ ಈ ವಿಷಯದ ಕುರಿತು ನೇರವಾಗಿ ಉಲ್ಲೇಖಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT