ಬುಧವಾರ, ಏಪ್ರಿಲ್ 1, 2020
19 °C

ದೆಹಲಿ ಹಿಂಸಾಚಾರ ನಿಯಂತ್ರಣಕ್ಕೆ ಸೇನೆಗೆ ಬುಲಾವ್: ಕೇಜ್ರಿವಾಲ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸಲು ಸೇನೆಗೆ ಆಹ್ವಾನ ನೀಡಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

‘ಹಿಂಸಾಚಾರ ನಿಯಂತ್ರಣಕ್ಕೆ ಪೊಲೀಸರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೂ ಶಾಂತಿ–ಸುವ್ಯವಸ್ಥೆ ನೆಲೆಸುತ್ತಿಲ್ಲ. ಜನರಲ್ಲಿ ಭದ್ರತೆಯ ಭಾವನೆ ಮೂಡುತ್ತಿಲ್ಲ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ತಕ್ಷಣ ಕರ್ಫ್ಯೂ ಹೇರಬೇಕು ಮತ್ತು ದುಷ್ಕರ್ಮಿಗಳನ್ನು ಹತ್ತಿಕ್ಕಲು ಸೇನೆಯನ್ನು ನಿಯೋಜಿಸಬೇಕು ಎಂದು ಕೇಂದ್ರ ಗೃಹ ಸಚಿವರನ್ನು ವಿನಂತಿಸಿ ಪತ್ರ ಬರೆಯುತ್ತೇನೆ ಎಂದು ಕೇಜ್ರಿವಾಲ್ ಹೇಳಿದರು.

ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಪರ–ವಿರುದ್ಧದ ಪ್ರತಿಭಟನೆಯು ಕೋಮು ಸಂಘರ್ಷಕ್ಕೆ ತಿರುಗಿದ ಪರಿಣಾಮ ರಾಷ್ಟ್ರ ರಾಜಧಾನಿಯ ಈಶಾನ್ಯ ಭಾಗದ ಕೆಲವು ಭಾಗಗಳಲ್ಲಿ ಬುಧವಾರವೂ ಹಿಂಸಾಚಾರ ಮುಂದುವರಿದಿದೆ. ಹಿಂಸಾಚಾರಕ್ಕೆ ಮತ್ತೆ ಏಳು ಜನರು ಬಲಿಯಾಗಿದ್ದು, ಒಟ್ಟು ಮೃತಪಟ್ಟವರ 20ಕ್ಕೆ ಏರಿಕೆಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು