ಮೇಲ್ಜಾತಿ ಮೀಸಲಾತಿ ಜಾರಿ

7

ಮೇಲ್ಜಾತಿ ಮೀಸಲಾತಿ ಜಾರಿ

Published:
Updated:

ನವದೆಹಲಿ: ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ 10ರಷ್ಟು ಮೀಸಲಾತಿ ನೀಡುವ ಸಂಬಂಧ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. ಇದಕ್ಕೆ ಸಂಬಂಧಪಟ್ಟ ಮಸೂದೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಸಹಿ ಹಾಕಿದ್ದ ಬೆನ್ನಲ್ಲೇ ಅಧಿಸೂಚನೆ ಪ್ರಕಟವಾಗಿದೆ.

ಸಂವಿಧಾನದ 15 ಮತ್ತು 16ನೇ ವಿಧಿಗೆ ಈ ಕಾಯ್ದೆ ಅನ್ವಯ ತಿದ್ದುಪಡಿ ತರಲಾಗಿದ್ದು, ಆರ್ಥಿಕವಾಗಿ ಹಿಂದುಳಿದ ಸಮಾಜದ ಯಾವುದೇ ವರ್ಗದ ನಾಗರಿಕರಿಗೆ ಈ ಮೀಸಲಾತಿ ನೀಡಲು ರಾಜ್ಯಗಳಿಗೆ ವಿಶೇಷ ಅನುಮತಿ ನೀಡಲಾಗಿದೆ. 

’ಶೈಕ್ಷಣಿಕ ಸಂಸ್ಥೆಗಳಲ್ಲಿ ಅಂದರೆ, ಖಾಸಗಿ ಅನುದಾನಿತ, ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲೂ (ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿ) ಈ ಮೀಸಲಾತಿ ಕಲ್ಪಿಸಬೇಕು’ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. 

ಮೇಲ್ಜಾಜಿ ಮೀಸಲಾತಿ ನೀತಿಯನ್ನು ಗುಜರಾತ್‌ ಸರ್ಕಾರ ಸೋಮವಾರದಿಂದಲೇ ಅನುಷ್ಠಾನಗೊಳಿಸಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !