ಶನಿವಾರ, ಜನವರಿ 25, 2020
28 °C
ಮಂದಗತಿಯ ಆರ್ಥಿಕತೆ ಪರಿಣಾಮ: ಕೈಗಾರಿಕಾ ಬೆಳವಣಿಗೆ ಇಳಿಕೆ

ಚಿಲ್ಲರೆ ಹಣದುಬ್ಬರ ಗರಿಷ್ಠ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದ ಆರ್ಥಿಕತೆಯು ಗಂಭೀರವಾದ ಸಮಸ್ಯೆಗಳನ್ನು ಎದುರಿಸುತ್ತಿದೆ ಎನ್ನುವುದನ್ನು ಗುರುವಾರ ಬಿಡುಗಡೆ ಆಗಿರುವ ಚಿಲ್ಲರೆ ಹಣದುಬ್ಬರ ಮತ್ತು ಕೈಗಾರಿಕಾ ಉತ್ಪಾದನೆಯ ಅಂಕಿ–ಅಂಶಗಳು ಇನ್ನಷ್ಟು ಸ್ಪಷ್ಟಪಡಿಸಿವೆ.

ಚಿಲ್ಲರೆ ಹಣದುಬ್ಬರವು ನವೆಂಬರ್‌ನಲ್ಲಿ ಶೇ 5.54ಕ್ಕೆ ಏರಿಕೆಯಾಗಿದೆ. ಇದು ಮೂರು ವರ್ಷಗಳ ಗರಿಷ್ಠ ಮಟ್ಟವಾಗಿದೆ. ಈ ಹಿಂದೆ 2016ರ ಜುಲೈನಲ್ಲಿ ಶೇ 6.07ರಷ್ಟು ಗರಿಷ್ಠ ಮಟ್ಟದಲ್ಲಿತ್ತು.

ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು ಗುರುವಾರ ಈ ಅಂಕಿ–ಅಂಶಗಳನ್ನು ಬಿಡುಗಡೆ ಮಾಡಿದೆ. ಆಹಾರ ಪದಾರ್ಥಗಳ ಬೆಲೆಗಳು ವರ್ಷದ ಹಿಂದಿನ ಮಟ್ಟಕ್ಕೆ ಹೋಲಿಸಿದರೆ ಶೇ 10ರಷ್ಟು ಏರಿಕೆ ದಾಖಲಿಸಿವೆ. ಹೀಗಾಗಿ ಚಿಲ್ಲರೆ ಹಣದುಬ್ಬರದಲ್ಲಿಯೂ ಏರಿಕೆಯಾಗಿದೆ. 

ಗ್ರಾಹಕ ಬೆಲೆ ಸೂಚ್ಯಂಕದ (ಸಿಪಿಐ) ಆಧಾರದ ಮೇಲೆ ಲೆಕ್ಕ ಹಾಕುವ ಚಿಲ್ಲರೆ ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ 4.62ರಷ್ಟು ಮತ್ತು 2018ರ ನವೆಂಬರ್‌ನಲ್ಲಿ ಶೇ 2.33ರಷ್ಟಿತ್ತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು