ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸಕ್ಕೆ ಹಾಜರಾಗಿ ಇಲ್ಲವೇ ಕ್ರಮ ಎದುರಿಸಲು ಸಿದ್ಧರಾಗಿ: ಮಮತಾ ಎಚ್ಚರಿಕೆ

Last Updated 13 ಜೂನ್ 2019, 9:38 IST
ಅಕ್ಷರ ಗಾತ್ರ

ಕೋಲ್ಕತ್ತ: ನಾಲ್ಕು ಗಂಟೆಗಳೊಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾ ನಿರತ ವೈದ್ಯರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಲ್ಲದೆ ಘಟನೆಯ ಹಿಂದೆ ಬಿಜೆಪಿ ಮತ್ತು ಸಿಪಿಎಂನ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನಾ ನಿರತ ಕಿರಿಯ ವೈದ್ಯರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಭೇಟಿ ಮಾಡಿ ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದರು. ಆ ಸಂದರ್ಭದಲ್ಲಿ ವೈದ್ಯರು ನ್ಯಾಯ ಬೇಕು ಎಂದು ಘೋಷಣೆ ಕೂಗಿದ್ದಾರೆ.

ಚಿಕಿತ್ಸೆ ಫಲಕಾರಿಯಾಗದೆ ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲಿ ಮಂಗಳವಾರ ರೋಗಿಯೊಬ್ಬರು ಮೃತಪಟ್ಟಿದ್ದರು.ವೈದ್ಯರ ನಿರ್ಲಕ್ಷದ ಆರೋಪ ಹೊರಿಸಿ ಮೃತರ ಕುಟುಂಬದವರು ಕಿರಿಯ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದನ್ನು ಖಂಡಿಸಿ ವೈದ್ಯರು ನಡೆಸಿದ ಪ್ರತಿಭಟನೆಯಲ್ಲಿ ಆಸ್ಪತ್ರೆಯ ಎಲ್ಲಾ ಹೊರ ಹೋಗಿ ಸೇವೆಯನ್ನು 9 ರಿಂದ 9ರ ವರಗೆ ಸ್ಥಗಿತಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT