ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಸಂತ್ರಸ್ತರ ಗುರುತು ಬಹಿರಂಗ: ಸುಪ್ರೀಂ ಕೋರ್ಟ್‌ ಸೂಚನೆ

Last Updated 22 ಅಕ್ಟೋಬರ್ 2018, 19:12 IST
ಅಕ್ಷರ ಗಾತ್ರ

ನವದೆಹಲಿ: ಅತ್ಯಾಚಾರ ಸಂತ್ರಸ್ತರ ಗುರುತು ಬಹಿರಂಗ ಪಡಿಸಿದ ಮಾಧ್ಯಮ ಸಂಸ್ಥೆಗಳ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ವಿವರಣೆ ನೀಡುವಂತೆ ಭಾರತೀಯ ಪತ್ರಿಕಾ ಮಂಡಳಿ, ಎಡಿಟರ್ಸ್‌ ಗಿಲ್ಡ್‌ ಹಾಗೂ ರಾಷ್ಟ್ರೀಯ ವಾರ್ತಾ ಪ್ರಸಾರ ನಿಯಮಗಳ ಪ್ರಾಧಿಕಾರಕ್ಕೆ (ಎನ್‌ಬಿಎಸ್‌ಎ) ಸುಪ್ರೀಂ ಕೋರ್ಟ್‌ ಸೂಚಿಸಿದೆ.

ಈ ಕುರಿತು ದಾಖಲಾಗಿದ್ದ ಪ್ರಕರಣಗಳ ಪೈಕಿ ಬಹುತೇಕ ಪ್ರಕರಣಗಳಲ್ಲಿ ಮಾಧ್ಯಮ ಸಂಸ್ಥೆ ಅಥವಾ ವರದಿಗಾರ ಕ್ಷಮೆ ಕೋರಿದ ಕಾರಣದಿಂದ ದೂರನ್ನು ಹಿಂಪಡೆಯಲಾಗಿದೆ.

‘ಪೊಲೀಸರತ್ತ ಬೆರಳು ಮಾಡುವುದು ನಿಮ್ಮ ಕೆಲಸವಲ್ಲ. ಅತ್ಯಾಚಾರ ಸಂತ್ರಸ್ತರ ಗುರುತು ಬಹಿರಂಗಪಡಿಸುವುದು ಕಾನೂನಿನ ಸ್ಪಷ್ಟ ಉಲ್ಲಂಘನೆ’ ಎಂದು ಮಾಧ್ಯಮ ಸಂಸ್ಥೆಗಳ ವಿರುದ್ಧ ನ್ಯಾಯಾಲಯ ಆಕ್ರೋಶ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT