ಶುಕ್ರವಾರ, ಮಾರ್ಚ್ 5, 2021
23 °C
ಹೊಸ ಆಚರಣೆ ಎಂದಿದ್ದ ಪೂಜಾ

ಮಹಾತ್ಮ ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸಿದ್ದ ಹಿಂದೂ ಮಹಾಸಭಾ ನಾಯಕಿ ಬಂಧನ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಅಲಿಗಡ: ಹುತಾತ್ಮರ ದಿನದಂದು (ಜನವರಿ 30) ಉತ್ತರ ಪ್ರದೇಶದಲ್ಲಿ ಮಹಾತ್ಮ ಗಾಂಧಿ ಹತ್ಯೆ ಘಟನೆಯನ್ನು ಮರುಸೃಷ್ಟಿಸಿ ಸಂಭ್ರಮಾಚರಿಸಿ ವಿಕೃತಿ ಮೆರೆದಿದ್ದ ಘಟನೆ ರಾಷ್ಟ್ರದಾದ್ಯಂತ ಚರ್ಚೆಯಾಗುತ್ತಿದ್ಧಂತೆ, ಘಟನೆಯ ರೂವಾರಿ ಪೂಜಾ ಶಕುನ್‌ ಪಾಂಡೆ ನಾಪತ್ತೆಯಾಗಿದ್ದರು. ಮಂಗಳವಾರ ಅಲಿಗಡದಲ್ಲಿ ಅವರನ್ನು ಬಂಧಿಸಲಾಗಿದೆ. 

ಅಖಿಲ ಭಾರತ ಹಿಂದೂ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಮತ್ತು ಅವರ ತಂಡ, ಮಹಾತ್ಮ ಗಾಂಧಿ ಅವರ 71ನೇ ಪುಣ್ಯಸ್ಮರಣೆಯ ದಿನ ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸುವ ಮೂಲಕ ಹತ್ಯೆ ಘಟನೆಯನ್ನು ಮರುಸೃಷ್ಟಿಸಲಾಗಿತ್ತು. ಬಲಪಂಥೀಯರ ಈ ಆಚರಣೆ ಸಂಬಂಧ ಉತ್ತರ ಪ್ರದೇಶ ಪೊಲೀಸರು 12 ಮಂದಿ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದರು. ವಿಡಿಯೊದಲ್ಲಿ ಕಾಣಿಸಿಕೊಂಡಿದ್ದ ಇತರೆ ಮೂವರನ್ನು ಕಳೆದ ವಾರ ಪೊಲೀಸರು ಬಂಧಿಸಿದ್ದರು. ಪೂಜಾ ಪತಿ ಅಶೋಕ್ ಪಾಂಡೆಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಭದ್ರತೆಗೆ ಗಾಂಧಿ ಒಪ್ಪಿದ್ದರೆ ಹತ್ಯೆ ತಪ್ಪಿಸಬಹುದಿತ್ತು: ಕಲ್ಯಾಣಮ್‌

ಕೇಸರಿಧಾರಿಯಾಗಿದ್ದ ಪೂಜಾ ಶಕುನ್‌ ಪಾಂಡೆ ಏರ್‌ ಪಿಸ್ತೂಲ್‌ ಮೂಲಕ ಗಾಂಧೀಜಿ ಚಿತ್ರಕ್ಕೆ ಗುಂಡು ಹಾರಿಸಿದ್ದು ಮತ್ತು ಗಾಂಧೀಜಿ ಹತ್ಯೆ ಮಾಡಿದ ನಾಥೂರಾಮ್‌ ಗೋಡ್ಸೆ ಚಿತ್ರಕ್ಕೆ ಮಾಲೆ ಹಾಕಿದ ವಿಡಿಯೊ, ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು. ಪೂಜಾ ಮಾಡಿದ ಕೃತ್ಯದ ವಿರುದ್ಧ ಬಹಳಷ್ಟು ಜನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. 

’ದಸರ ಸಂದರ್ಭದಲ್ಲಿ ರಾವಣ ಪ್ರತಿಕೃತಿ ದಹಿಸುವಂತೆ ಇದೂ ಸಹ ವಾರ್ಷಿಕ ಆಚರಣೆಯಾಗಲಿದೆ. ಸಂಘದಿಂದ ಹೊಸ ಸಂಪ್ರದಾಯ ಪ್ರಾರಂಭಿಸಲಾಗಿದೆ’ ಎಂದು ಮಾಧ್ಯಮಗಳಿಗೆ ಪೂಜಾ ಪ್ರತಿಕ್ರಿಯಿಸಿದ್ದರು. ಗಾಂಧಿ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ನೌರಂಗಬಾದ್‌ನಲ್ಲಿರುವ ಹಿಂದೂ ಮಹಾಸಭಾ ಕಚೇರಿ ಹೊರ ಭಾಗದಲ್ಲಿ ಈ ಕೃತ್ಯ ನಡೆದಿತ್ತು. 

ಇದನ್ನೂ ಓದಿ:ಹಾತ್ಮ ಗಾಂಧಿ ಹತ್ಯೆ ಘಟನೆ ಮರುಸೃಷ್ಟಿಸಿ ಸಂಭ್ರಮಾಚರಿಸಿದ ಹಿಂದೂ ಮಹಾಸಭಾ ನಾಯಕಿ

ಹಿಂದೂ ಮಹಾಸಭಾ ನಾಥೂರಾಮ್‌ ಗೋಡ್ಸೆ ಕಾರ್ಯವನ್ನು ದೇಶಭಕ್ತಿ ಎಂದೇ ಬಿಂಬಿಸಲು ಪ್ರಯತ್ನಿಸುತ್ತಿದ್ದು, 2015ರಲ್ಲಿ  ಹಿಂದೂ ಮಹಾಸಭಾ ಮುಖಂಡ ಸ್ವಾಮಿ ಪ್ರಣವಾನಂದ ಗೋಡ್ಸೆಯ ಪ್ರತಿಮೆಗಳನ್ನು ಅನಾವರಣಗೊಳಿಸುವುದಾಗಿ ಘೋಷಿಸಿದ್ದರು. ಕರ್ನಾಟಕದ ಆರು ಜಿಲ್ಲೆಗಳಲ್ಲಿ ಗೋಡ್ಸೆ ಪ್ರತಿಮೆ ಸ್ಥಾಪಿಸುವ ಯೋಜನೆ ಪ್ರಕಟಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು