ಭೀಕರ ರಸ್ತೆ ಅಪಘಾತ: 9 ವಿದ್ಯಾರ್ಥಿಗಳು ಸಾವು

ಪುಣೆ: ಮಹಾರಾಷ್ಟ್ರದ ಪುಣೆ–ಸೊಲ್ಲಾಪುರ ರಾಪ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ 9 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಕದ್ವಂಕ್ ವಾಸ್ತಿ ಪ್ರದೇಶದಲ್ಲಿ ಅಪಘಾತ ಸಂಭವಿಸಿದ. ಇದು ಪುಣೆಯಿಂದ 20 ಕಿ.ಮೀ ದೂರದಲ್ಲಿದೆ.
Maharashtra: 9 people, in a car, died in a collision with a truck on Pune-Solapur highway near Kadamwak Wasti village in Pune, late last night. All the deceased were residents of Yavat village of Pune. pic.twitter.com/CVihgprc92
— ANI (@ANI) July 19, 2019
ವಿದ್ಯಾರ್ಥಿಗಳು ರಾಯಗಡದಿಂದ ತನ್ನ ಸ್ವಂತ ಊರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ಈ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿನ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.