ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚಾರಣೆಗೆ ಹಾಜರಾದ ವಾದ್ರಾ

Last Updated 4 ಜೂನ್ 2019, 19:09 IST
ಅಕ್ಷರ ಗಾತ್ರ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್‌ ವಾದ್ರಾ ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ಮಂಗಳವಾರ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದರು.

ಆರೋಗ್ಯ ಸಮಸ್ಯೆಯಿಂದಾಗಿ ಅವರು ಕಳೆದ ವಾರ (ಮೇ 31)ವಿಚಾರಣೆಗೆ ಹಾಜರಾಗಿರಲಿಲ್ಲ. ಆದರೆ ಮೇ 30ರಂದು ಹಾಜರಾಗಿದ್ದ ಅವರನ್ನು ಐದು ಗಂಟೆಗಳ ಕಾಲ ಇ.ಡಿ ವಿಚಾರಣೆಗೆ ಒಳಪಡಿಸಿತ್ತು.

ಲಂಡನ್‌ ನಿವೇಶನ ಖರೀದಿಸುವ ವೇಳೆ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಮತ್ತು ಬಿಕಾನೇರ್‌ನ ಭೂ ಹಂಚಿಕೆ ಪ್ರಕರಣ ಎದುರಿಸುತ್ತಿದ್ದಾರೆ.

ಮಂಗಳವಾರ ವಿಚಾರಣೆಗೆ ಹಾಜರಾಗುವುದಕ್ಕೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ವಾದ್ರಾ ಹೀಗೆ ಬರೆದುಕೊಂಡಿದ್ದರು, ‘ಇದು 13ನೇ ವಿಚಾರಣೆಯಾಗಿದ್ದು, ಇದುವರೆಗೂ ಇ.ಡಿ 80 ಗಂಟೆಗಳವರೆಗೆ ವಿಚಾರಣೆಗೆ ಒಳಪಡಿಸಿದೆ’.ದೆಹಲಿ ಹೈಕೋರ್ಟ್‌, ಅವರಿಗೆ ಆರು ವಾರಗಳವರೆಗೆ ವಿದೇಶಕ್ಕೆ ತೆರಳಲು ಸೋಮವಾರ ಅನುಮತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT