ಶುಕ್ರವಾರ, ಡಿಸೆಂಬರ್ 13, 2019
17 °C

ರಾಜಕೀಯ ಪ್ರವೇಶ: ವಾದ್ರಾ ಸುಳಿವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜೈಪುರ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ, ತಾವು ರಾಜಕೀಯ ಪ್ರವೇಶಿಸುವ ಕುರಿತು ಸುಳಿವು ನೀಡಿದ್ದಾರೆ.

ಮಂಗಳವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬೇರೆ ಬೇರೆ ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ನನಗೆ ಆಹ್ವಾನಗಳು ಬಂದಿವೆ. ಆದರೆ, ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ಇನ್ನೂ ನಿರ್ಧರಿಸಿಲ್ಲ’ ಎಂದು ಹೇಳಿದರು.

‘ಸಕ್ರಿಯ ರಾಜಕಾರಣಕ್ಕೆ ಬರುವಂತೆ ನನ್ನ ಬೆಂಬಲಿಗರು, ಹಿತೈಷಿಗಳು ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ನನ್ನ ಜನ್ಮಸ್ಥಳವಾದ ಮುರಾದಾಬಾದ್‌ನಿಂದಲೇ ನನ್ನ ರಾಜಕೀಯ ಪಯಣ ಆರಂಭವಾಗಬಹುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು