ಮಂಗಳವಾರ, ಮಾರ್ಚ್ 2, 2021
26 °C

ಇ.ಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದ ರಾಬರ್ಟ್ ವಾದ್ರಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಪತಿ ರಾಬರ್ಟ್‌ ವಾದ್ರಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಜಾರಿ ನಿರ್ದೇಶನಾಲಯ(ಇ.ಡಿ) ದ ವಿಚಾರಣೆಗೆ ಹಾಜರಾಗಿದ್ದಾರೆ.

ವಿದೇಶಗಳಲ್ಲಿ ಬೇನಾಮಿ ಆಸ್ತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ  ಅಧಿಕಾರಿಗಳ ಎದುರು ರಾಬರ್ಟ್‌ ವಾದ್ರಾ ವಿಚಾರಣೆಗೆ ಹಾಜರಾದರು. ಪ್ರಿಯಾಂಕ ಗಾಂಧಿ ಕೂಡ ಪತಿ ವಾದ್ರಾ ಜತೆಗೆ ಇಡಿ ಕಚೇರಿವರೆಗೂ ಬಂದಿದ್ದರು. ವಾದ್ರಾ ಕಚೇರಿ ಒಳಗೆ ಹೋದ ಬಳಿಕ ಅವರು ಅಲ್ಲಿಂದ ತೆರಳಿದರು. 

ಸಂಜೆ ನಾಲ್ಕು ಗಂಟೆಗೆ ಹಾಜರಾದ ಅವರನ್ನು ಇ.ಡಿ  ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ದೆಹಲಿ ಹೈಕೋರ್ಟ್‌ ಫೆಬ್ರುವರಿ 16ರ ವರೆಗೂ ಜಾಮೀನು ನೀಡಿದೆ. 

ಡಿಎಲ್‌ಎಫ್‌ ಮತ್ತು ಓಂಕಾರೇಶ್ವರ ಪ್ರಾಪರ್ಟೀಸ್‌ ಮೂಲಕ ಗುರುಗ್ರಾಮದಲ್ಲಿ ಅಕ್ರಮ ಭೂ ಖರೀದಿ ಹಾಗೂ ವಾದ್ರಾ ಅವರ ಕಂಪೆನಿಯಾದ ಸ್ಕೈ ಲೈಟ್‌ ಹಾಸ್ಪಿಟಾಲಿಟಿ ಮೂಲಕ ಅಕ್ರಮ ಹಣ ವರ್ಗಾವಣೆ ಮತ್ತು ವಿದೇಶಗಳಲ್ಲಿ ಅಕ್ರಮ ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ ಎಂದು ಇ.ಡಿ ಯ ಉನ್ನತ ಮೂಲಗಳು ತಿಳಿಸಿವೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು